ಬಂಟ್ವಾಳ: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲಿತರಾಗಿ ಕಣಕ್ಕಿಳಿದ ಎಲ್ಲ ಅಭ್ಯರ್ಥಿಗಳಿಗೆ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಅಭಿನಂದನಾ ಕಾರ್ಯಕ್ರಮ ಡಿ.26ರಂದು ಬೆಳಗ್ಗೆ 11 ಗಂಟೆಗೆ ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಲಿದೆ. ಈ ವಿಷಯವನ್ನು ಬಂಟ್ವಾಳ ಬ್ಲಾಕ್ ಅಧ್ಯಕ್ಷ ಬೇಬಿ ಕುಂದರ್ ಮತ್ತು ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ. ಡಿ.22ರಂದು ಚುನಾವಣೆ ನಡೆದಿದ್ದು, ಡಿ.30ರಂದು ಮತ ಎಣಿಕೆ ನಡೆಯಲಿದೆ.