ಪ್ರಮುಖ ಸುದ್ದಿಗಳು

ಯತ್ನಾಳ್ ಇತ್ತೀಚಿನ ಹೇಳಿಕೆಗಳು ಪಕ್ಷಕ್ಕೆ ಗೌರವ ತರುವಂಥದ್ದಲ್ಲ: ಡಿ.ವಿ.ಸದಾನಂದ ಗೌಡ

ಬಂಟ್ವಾಳ: ಶಿಸ್ತುಬದ್ಧ ಪಕ್ಷವಾದ ಬಿಜೆಪಿಯಲ್ಲಿ ಯತ್ನಾಳ್ ಅವರಂಥ ಶಾಸಕರ ನಡವಳಿಕೆಗಳು ಪಕ್ಷಕ್ಕೆ ಗೌರವ ತರುವಂಥದ್ದಲ್ಲ. ಇವುಗಳನ್ನು ಪಕ್ಷದ ನಾಯಕತ್ವ ಗಮನಿಸುತ್ತಿದ್ದು, ಕ್ರಮ ಕೈಗೊಳ್ಳುವ ವಿಚಾರ ಅವರಿಗೆ ಬಿಟ್ಟದ್ದು ಎಂದು ಕೇಂದ್ರ ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ.

ಕಲ್ಲಡ್ಕದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಬಸವರಾಜ ಪಾಟೀಲ್ ಯತ್ನಾಳ್ ಅವರ ಇತ್ತೀಚಿನ ಹೇಳಿಕೆಗಳ ಕುರಿತು ಉಲ್ಲೇಖಿಸಿ, ಇತ್ತೀಚಿನ ದಿನಗಳಲ್ಲಿ ಅವರ ನಡವಳಿಕೆಗಳು, ಪಕ್ಷ ನಾಯಕತ್ವದ ಕುರಿತ ಹೇಳಿಕೆಗಳು ಬಿಜೆಪಿ ಶಾಸಕರಾಗಿ ಶೋಭೆ ತರುವಂಥದ್ದಲ್ಲ. ಹಿಂದೆ ನಾನು ಪಕ್ಷದ ರಾಜ್ಯಾಧ್ಯಕ್ಷನಾಗಿದ್ದಾಗ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಂಡಿದ್ದೆ. ಈಗ ಮತ್ತೂ ಸರಿಯಾಗುವುದಿಲ್ಲ ಎಂದಾದರೆ, ಪಕ್ಷದ ನಾಯಕತ್ವ ಗಮನ ಹರಿಸಬಹುದು. ಶಿಸ್ತುಬದ್ಧ ಪಕ್ಷ ಎಂದಾದ ಮೇಲೆ ನಾವೆಲ್ಲರೂ ಶಿಸ್ತಿನಿಂದ ಕೆಲಸ ಮಾಡಲು ಪ್ರಯತ್ನಿಸಬೇಕು ಎಂದು ಹೇಳಿದರು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts