ಚಿತ್ರಗಳಿಗೆ ಇಲ್ಲಿ ಕ್ಲಿಕ್ ಮಾಡಿರಿ
ಬಂಟ್ವಾಳ : ಸೂರಿಕುಮೇರು ಸೈಂಟ್ ಜೋಸೆಫ್ ಚರ್ಚ್ ನಲ್ಲಿ ಮಂಗಳೂರು ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಪೀಟರ್ ಪಾವ್ಲ್ ಸಲ್ಡಾನ್ಹಾರವರ ಆದೇಶದಂತೆ ಸರಳ ರೀತಿಯಲ್ಲಿ ಕ್ರಿಸ್ಮಸ್ ಹಬ್ಬವನ್ನು ಆಚರಿಸಲಾಯಿತು.
ಚರ್ಚ್ ಧರ್ಮಗುರು ವಂದನೀಯ ಫಾದರ್ ಗ್ರೆಗರಿ ಪಿರೇರಾ ಬಲಿ ಪೂಜೆಯ ನೇತೃತ್ವವನ್ನು ವಹಿಸಿದ್ದರು.
ಈ ಸಂದರ್ಭ ಕ್ರಿಸ್ಮಸ್ ಸಂದೇಶ ನೀಡಿದ ಅವರು, ಮನುಕುಲದ ಉದ್ದಾರಕ್ಕಾಗಿಯೇ ಧರೆಗಿಳಿದು ಬಂದ ಪ್ರಭು ಯೇಸುಕ್ರಿಸ್ತರು ಕೋವಿಡ್ ಎನ್ನುವ ಮಹಾಮಾರಿ ರೋಗ ತೊಲಗಿಸಿ, ಎಲ್ಲರನ್ನೂ ಹರಸಲಿ ಎಂದು ಪ್ರಾರ್ಥಿಸಿದರು.
ವಂದನೀಯ ಫಾದರ್ ವಿಕ್ಟರ್ ಡಯಾಸ್ ಬಲಿಪೂಜೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಪಾಲನಾ ಸಮಿತಿಯ ಉಪಾಧ್ಯಕ್ಷರಾದ ಎಲಿಯಾಸ್ ಪಿರೇರಾ, ಕಾರ್ಯದರ್ಶಿ ಮೇರಿ ಡಿಸೋಜ, ಕಾನ್ವೆಂಟ್ ಮುಖ್ಯಸ್ಥೆ ಸಿಸ್ಟರ್ ನ್ಯಾನ್ಸಿ, ಚರ್ಚ್ ಮುಖಂಡರಾದ ಸ್ಟೀವನ್ ಆಲ್ವಿನ್ ಪಾಯ್ಸ್ ಮತ್ತು ಅನಿತಾ ಮಾರ್ಟಿಸ್ ಉಪಸ್ಥಿತರಿದ್ದರು. ಶಿಕ್ಷಕಿ ರಶ್ಮಿ ಸ್ಟೀವನ್ ಮಾರ್ಟಿಸ್ ಕಾರ್ಯಕ್ರಮ ನಿರೂಪಿಸಿದರು. ಕಥೊಲಿಕ್ ಸಭಾ ಸೂರಿಕುಮೇರು ಬೊರಿಮಾರ್ ಘಟಕದ ವತಿಯಿಂದ ಎಲ್ಲಾ ಭಕ್ತಾದಿಗಳಿಗೆ ಕ್ರಿಸ್ಮಸ್ ಕೇಕ್ ಹಂಚಲಾಯಿತು.