ಬಂಟ್ವಾಳ: ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವಸ್ಥಾನವನ್ನು ಶುಕ್ರವಾರ ವೈಕುಂಠ ಏಕಾದಶಿಯ ಹಿನ್ನೆಲೆಯಲ್ಲಿ ಹೂವುಗಳಿಂದ ಸಿಂಗರಿಸಿ, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರಗಿದವು. ಕಾರ್ಯಕ್ರಮದಲ್ಲಿ ಸಮಾಜ ಬಾಂಧವರಿಂದ ಶ್ರೀ ವಿಷ್ಣು ಸಹಸ್ರನಾಮ ಪಠಣ, ನಿರ್ಮಲ್ಯ ವಿಸರ್ಜನೆ ಪೂಜೆ, ಭಜನಾ ಕಾರ್ಯಕ್ರಮ, ಮಧ್ಯಾಹ್ನ ಪೂಜೆ, ಸಂಜೆ ನದಿ ತೀರದಲ್ಲಿ ಗಂಗಾ ಪೂಜನೆ, ಗಂಗಾ ಮಾತೆಗೆ ಬಾಗಿನ ಅರ್ಪಣೆ, ಗಂಗಾರತಿ, ಪ್ರಸಾದ ವಿತರಣೆ, ಸಂಜೆ ದೀಪ ನಮಸ್ಕಾರ ಪೂಜೆ ನಡೆಯಿತು. ಸರಕಾರದ ನಿಯಮದಂತೆ ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ದೇವಸ್ಥಾನ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು
About the Author
Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to comment on "ಬಂಟ್ವಾಳ: ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ಆಚರಣೆ"