ಬಂಟ್ವಾಳ

ಬಂಟ್ವಾಳ: ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ಆಚರಣೆ

ಬಂಟ್ವಾಳ: ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವಸ್ಥಾನವನ್ನು ಶುಕ್ರವಾರ ವೈಕುಂಠ ಏಕಾದಶಿಯ ಹಿನ್ನೆಲೆಯಲ್ಲಿ ಹೂವುಗಳಿಂದ ಸಿಂಗರಿಸಿ, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರಗಿದವು. ಕಾರ್ಯಕ್ರಮದಲ್ಲಿ ಸಮಾಜ ಬಾಂಧವರಿಂದ ಶ್ರೀ ವಿಷ್ಣು ಸಹಸ್ರನಾಮ ಪಠಣ, ನಿರ್ಮಲ್ಯ ವಿಸರ್ಜನೆ ಪೂಜೆ, ಭಜನಾ ಕಾರ್ಯಕ್ರಮ, ಮಧ್ಯಾಹ್ನ ಪೂಜೆ, ಸಂಜೆ ನದಿ ತೀರದಲ್ಲಿ ಗಂಗಾ ಪೂಜನೆ, ಗಂಗಾ ಮಾತೆಗೆ ಬಾಗಿನ ಅರ್ಪಣೆ, ಗಂಗಾರತಿ, ಪ್ರಸಾದ ವಿತರಣೆ, ಸಂಜೆ ದೀಪ ನಮಸ್ಕಾರ ಪೂಜೆ ನಡೆಯಿತು. ಸರಕಾರದ ನಿಯಮದಂತೆ ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ದೇವಸ್ಥಾನ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು.  ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts