ಔಷಧಿ ಎಂದು ವಿಷ ಪದಾರ್ಥ ಸೇವಿಸಿ ಗ್ರಾಪಂ ಅಭ್ಯರ್ಥಿ ಸಾವು

ಬಂಟ್ವಾಳ: ಬಾಯಿ ಹುಣ್ಣಿಗೆ ಎಂದು ತೆಗೆದುಕೊಳ್ಳುತ್ತಿದ್ದ ಔಷಧಿ ಬದಲಾಗಿ ಖಾಲಿಯಾದ ಔಷಧ ಬಾಟಲಲ್ಲಿಟ್ಟಿದ್ದ ಕಳೆನಾಶಕ ವನ್ನು ಸೇವಿಸಿ ಗ್ರಾಪಂ ನಿಕಟಪೂರ್ವ ಸದಸ್ಯ ಹಾಗೂ ಹಾಲಿ ಅಭ್ಯರ್ಥಿಯೊಬ್ಬರು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕಾವಳಮುಡೂರು ಗ್ರಾಮದಲ್ಲಿ ನಡೆದಿದೆ.

ಕಾವಳಮುಡೂರು ಗ್ರಾಮದ, ಅರ್ಗತ್ಯಾರು ನಿವಾಸಿ  ಜಯಂತ ಪ್ರಭು(58) ಮೃತಪಟ್ಟವರು. ಡಿ.21ರಂದು ರಾತ್ರಿ 11 ಗಂಟೆಯ ವೇಳೆ ತನ್ನ ಬಾಯಿ ಹುಣ್ಣಿಗೆಂದು ತೆಗೆದುಕೊಳ್ಳುತ್ತಿದ್ದ  ಔಷಧದ ಬದಲಾಗಿ ಖಾಲಿಯಾಗಿದ್ದ ಔಷಧ ಬಾಟಲಿಯಲ್ಲಿ ಶೇಖರಿಸಿಟ್ಟಿದ್ದ ಟ್ರೈಕಾಟ್ ಎಂಬ ಹುಲ್ಲಿಗೆ ಸಿಂಪಡಣೆ ಮಾಡುವ ಕಳೆನಾಶಕ ಔಷಧವನ್ನು ಸಿರಪ್ ಎಂದು ತಪ್ಪಾಗಿ ಭಾವಿಸಿ ಅಲ್ಪ ಪ್ರಮಾಣದಲ್ಲಿ ಸೇವಿಸಿದ್ದರು. ಮರುದಿನ ಗ್ರಾ.ಪಂ. ಚುನಾವಣೆಯಲ್ಲಿ ಮತದಾನ ಮಾಡಿದ್ದರಲ್ಲದೆ ಮತಗಟ್ಟೆಯಲ್ಲೂ ಒಂದಷ್ಟು ಹೊತ್ತು ಕಳೆದು ಕೊನೆಕ್ಷಣದ ಮತದಾರನ ಮನವೊಲಿಸುವಲ್ಲಿಯೂ ತೊಡಗಿದ್ದರು. ಬಳಿಕ ರಾತ್ರಿ ವೇಳೆಗೆ ದಿಢೀರ್ ಅಸ್ವಸ್ಥರಾಗಿದ್ದರೆನ್ನಲಾಗಿದ್ದು ತತ್‌ಕ್ಷಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು.ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು  ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಅವರು ಸೋಮವಾರ ಮಧ್ಯಾಹ್ನದ ಹೊತ್ತಿಗೆ ಕೊನೆಯುಸಿರೆಳೆದಿದ್ದಾರೆ.  ಈ ಬಗ್ಗೆ ಅವರ ಪುತ್ರ ನೀಡಿರುವ ದೂರಿನಂತೆ ಪುಂಜಾಲಕಟ್ಟೆ ಪೊಲೀಸರು ಕೇಸು ದಾಖಲಿಸಿದ್ದಾರೆ.  ಅವರು ಪತ್ನಿ, ಪುತ್ರನನ್ನು ಅಗಲಿದ್ದಾರೆ. ಮಾಜಿ ಸಚಿವ ಬಿ.ರಮಾನಾಥ ರೈ,ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿಕುಂದರ್,ಜಿ.ಪಂ. ಸದಸ್ಯ ಬಿ.ಪದ್ಮಶೇಖರ ಜೈನ್ ಮೊದಲಾದವರು ಅಂತಿಮ ನಮನ ಸಲ್ಲಿಸಿದರು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಔಷಧಿ ಎಂದು ವಿಷ ಪದಾರ್ಥ ಸೇವಿಸಿ ಗ್ರಾಪಂ ಅಭ್ಯರ್ಥಿ ಸಾವು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*