ಬಂಟ್ವಾಳ

ಗ್ರಾಪಂ ಚುನಾವಣೆ: ಬಂಟ್ವಾಳದಲ್ಲಿ ಮತ ಎಣಿಕೆ ಪೂರ್ವಭಾವಿ ತರಬೇತಿ

ಬಂಟ್ವಾಳ: ಗ್ರಾಮ ಪಂಚಾಯಿತಿ ಚುನಾವಣೆಯ ಹಿನ್ನೆಲೆಯಲ್ಲಿ ಮತ ಎಣಿಕೆಯ ಪೂರ್ವಭಾವಿ ತರಬೇತಿ ಸೋಮವಾರ ಬಂಟ್ವಾಳ ತಾಲೂಕು ಪಂಚಾಯಿತಿ ಸಭಾಂಗಣ ಮತ್ತು ಮೊಡಂಕಾಪು ಇನಫೆಂಟ್ ಜೀಸಸ್ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಏಕಕಾಲದಲ್ಲಿ ನಡೆಯಿತು.

ಈ ಸಂದರ್ಭ ಸಹಾಯಕ ಕಮೀಷನರ್ ಮದನ್ ಮೋಹನ್, ತಹಸೀಲ್ದಾರ್ ಅನಿತಾಲಕ್ಷ್ಮೀ, ಮತ ಎಣಿಕೆಯ ನೋಡಲ್ ಅಧಿಕಾರಿಯಾಗಿರುವ ಜಿಲ್ಲಾ ತರಬೇತಿ ಸಂಸ್ಥೆ ಪ್ರಿನ್ಸಿಪಾಲ್ ವೆಂಕಟೇಶ್, ತಾಪಂ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಉಪತಹಸೀಲ್ದಾರ್ ರಾಜೇಶ್ ನಾಯ್ಕ್, ಕಂದಾಯ ಇಲಾಖೆಯ ನಿರೀಕ್ಷಕರಾದ ರಾಮ ಕಾಟಿಪಳ್ಳ, ನವೀನ್ ಬೆಂಜನಪದವು, ದಿವಾಕರ ಮುಗುಳ್ಯ ಉಪಸ್ಥಿತರಿದ್ದರು. ತಾಪಂ ಸಭಾಂಗಣದಲ್ಲಿ ಚುನಾವಣಾಧಿಕಾರಿ, ಸಹಾಯಕ ಚುನಾವಣಾಧಿಕಾರಿಗಳಿಗೆ ತರಬೇತಿ ನಡೆದರೆ, ಮೊಡಂಕಾಪಿನಲ್ಲಿ ಮತ ಎಣಿಕೆಯ ಮೇಲ್ವಿಚಾರಕರು, ಎಣಿಕೆ ಸಿಬ್ಬಂದಿಗೆ ತರಬೇತಿ ನಡೆಯಿತು. ತಾಪಂನಲ್ಲಿ ಸರ್ಕಾರಿ ಪಾಲಿಟೆಕ್ನಿಕ್ ಉಪನ್ಯಾಸಕ ಮೋಹನ್, ಮೊಡಂಕಾಪಿನಲ್ಲಿ ಸನತ್ ರಾಮ್, ಉದಯಕುಮಾರ್ ತರಬೇತಿಯನ್ನು ನೀಡಿದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts