ವಿಟ್ಲ: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಡಿ.29ರಂದು ಶ್ರೀ ಗುರುದೇವಾನಂದ ಸ್ವಾಮಿಗಳವರ ದಿವ್ಯ ಉಪಸ್ಥಿತಿಯಲ್ಲಿ ಶ್ರೀ ದತ್ತ ಜಯಂತ್ಯುತ್ಸವ-ಶ್ರೀ ದತ್ತ ಮಹಾಯಾಗ ಸಪ್ತಾಹ ಸಮಾಪ್ತಿಯು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿರುವುದು.
ಬೆಳಿಗ್ಗೆ ಗಂಟೆ 8ಕ್ಕೆ ಮಹಾಮಂಗಳಾರತಿ, 9ಕ್ಕೆ ಶ್ರೀ ದತ್ತಮಾಲಾಧಾರಿಗಳಿಂದ ನಾಮಸಂಕೀರ್ತನಾ ಶೋಭಾಯಾತ್ರೆ, ಬಳಿಕ ಸ್ವಯಂಭೂ ನಾಗರಾಜ ಸನ್ನಿಧಿಯಲ್ಲಿ ನಾಗತಂಬಿಲ, ಗಂಟೆ 11ರಿಂದ ಪೂಜ್ಯ ಶ್ರೀಗಳವರಿಂದ ಅನುಗ್ರಹ ಸಂದೇಶ ಇರಲಿದೆ.
ಮಧ್ಯಾಹ್ನ ಗಂಟೆ 12ರಿಂದ ಶ್ರೀ ದತ್ತ ಮಹಾಯಾಗ ಸಪ್ತಾಹದ ಪೂರ್ಣಾಹುತಿ, ವೇದ-ಗುರುಚರಿತ್ರೆ ಪಾರಾಯಣ ಸಮಾಪ್ತಿ, ಮಹಾಪೂಜೆ, ಪೂಜ್ಯ ಶ್ರೀಗಳವರಿಂದ ಸಂಪ್ರದಾಯದಂತೆ ಮಧುಕರೀ; ಮಂತ್ರಾಕ್ಷತೆ, ಮಹಾಸಂತರ್ಪಣೆ. ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ಅಪರಾಹ್ಣ ಗಂಟೆ 3 ರಿಂದ ಗೋಣಿಬೀಡು ಸಂಜಯಕುಮಾರ್ ಶೆಟ್ಟಿಯವರ ಸಂಯೋಜನೆಯಲ್ಲಿ ’ಚೂಡಾಮಣಿ’ ಯಕ್ಷಗಾನ ಬಯಲಾಟ. ರಾತ್ರಿ ರಂಗಪೂಜೆ, ಮಹಾಪೂಜೆ, ಬೆಳ್ಳಿ ರಥೋತ್ಸವ ಸೇವೆ ಹಾಗೂ ಉಯ್ಯಾಲೆ ಸೇವೆಗಳು ನಡೆಯಲಿವೆ.