ಬಂಟ್ವಾಳ ತಾಲೂಕಿನ ಗೋಳ್ತಮಜಲು ಗ್ರಾ.ಪಂ.ವ್ಯಾಪ್ತಿಯ ನೆಟ್ಲ ಎಂಬಲ್ಲಿ ಬುಧವಾರ ಸಂಜೆ ವಾಹನದಲ್ಲಿ ಗೆಲುವಿನ ಸಂಭ್ರಮದೊಂದಿಗೆ ಮನೆಗೆ ಮರಳುತ್ತಿದ್ದ ವೇಳೆ ನಡೆದ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದಾರೆ.
ನೆಟ್ಲದ ಮುಂಡಾಜೆ ಎಂಬಲ್ಲಿ ಅಪಘಾತ ನಡೆದಿದೆ. ಜೀಪಿನಲ್ಲಿ ಮತ ಎಣಿಕಾ ಕೇಂದ್ರದಿಂದ ಅಭ್ಯರ್ಥಿಗಳನ್ನು ಕರೆದುಕೊಂಡು ಮರಳಿ ಮನೆಗೆ ಆಗಮಿಸುತ್ತಿದ್ದ ವೇಳೆ ವಾಹನ ಚಾಲಕನ ನಿಯಂತ್ರಣ ತಪ್ಪಿ ಉರುಳಿದೆ. ಈ ಸಂದರ್ಭ ವಾಹನದಲ್ಲಿದ್ದ ನೆಟ್ಲ ಸಮೀಪ ನಿವಾಸಿ ನರೇಶ್ (30) ಎಂಬವರು ವಾಹನದಡಿಗೆ ಸಿಲುಕಿ ಮೃತಪಟ್ಟಿದ್ದಾರೆ. ಮತ್ತೋರ್ವ ಜಗನ್ನಾಥ ಎಂಬವರು ಗಾಯಗೊಂಡು ಆಸ್ಪತ್ರೆಗೆ ದಾಖಲುಗೊಂಡಿದ್ದಾರೆ. ಘಟನೆಯಲ್ಲಿ ವಿಜೇತ ಅಭ್ಯರ್ಥಿಯೂ ಆಗಿರುವ ದೀಪಕ್, ಗುರುವಪ್ಪ, ಸುಚಿತ್ರಾ, ನಳಿನಿ, ಯೋಗೀಶ್ ಅವರೂ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…