

ಬಂಟ್ವಾಳ: ಮೂಡನಡುಗೋಡು ಗ್ರಾಮದ ದಡ್ಡಲಕಾಡು ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ತಾಲೂಕಿನಲ್ಲಿಯೇ ಅತ್ಯಧಿಕ ಸಂಖ್ಯೆ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು ಶಿಕ್ಷಣ ಇಲಾಖೆಯ ನಿರ್ದೇಶನದಂತೆ ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಶಾಲೆಯ ಚಟುವಟಿಕೆಗಳನ್ನು ಪುನಾರಂಭಿಸಲಾಗಿದೆ.
ತರಗತಿ ಪ್ರವೇಶಿಸುವ ಮೊದಲು ಸ್ಯಾನಿಟೈಜರ್ ಹಾಕಿ, ಒಂದು ಬೆಂಚಿನಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಮಾತ್ರ ಕುಳಿತು ಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಮುನ್ನೆಚ್ಚರಿಕೆಯಾಗಿ ಎಲ್ಲಾ ಶಿಕ್ಷಕರರು ಹಾಗೂ ಶಿಕ್ಷಕೇತರ ಸಿಬ್ಬಂದಿ ಗಳಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಬಳಿಕ ಶಾಲಾ ದತ್ತು ಸಂಘಟನೆಯಾದ ಶ್ರೀ ದುರ್ಗಾ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಅಂಚನ್ ಅವರ ಅಧ್ಯಕ್ಷೆಯಲ್ಲಿ ಶಿಕ್ಷಕರು ಹಾಗೂ ಪೋಷಕರ ಸಭೆ ನಡೆಸಿ ಪೋಷಕರಿಗೆ ಸೂಕ್ತ ಸಲಹೆ, ಸೂಚನೆಗಳನ್ನು ನೀಡಲಾಯಿತು. ಈ ಸಂದರ್ಭ ಪ್ರೌಢಶಾಲಾ ವಿಭಾಗದ ಶಾಲಾಭಿವೃದ್ದಿ ಸಮಿತಿ ಕಾರ್ಯಧ್ಯಕ್ಷ ಪುರುಷೋತ್ತಮ ಅಂಚನ್, ಪ್ರಾಥಮಿಕ ವಿಭಾಗದ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ರಾಮಚಂದ್ರ ಪೂಜಾರಿ, ಮುಖ್ಯೋಪಾಧ್ಯಯರಾದ ಅನಿತಾ, ಮೌರೀಸ್, ಹಿಲ್ಡಾ ಫೆರ್ನಾಂಡೀಸ್ ಉಪಸ್ಥಿತರಿದ್ದರು.



Be the first to comment on "ದಡ್ಡಲಕಾಡು ಸರ್ಕಾರಿ ಹೈಸ್ಕೂಲಿನಲ್ಲಿ ಶಾಲಾ ಚಟುವಟಿಕೆ ಪುನಾರಂಭ"