ಬಂಟ್ವಾಳ

ದಡ್ಡಲಕಾಡು ಸರ್ಕಾರಿ ಹೈಸ್ಕೂಲಿನಲ್ಲಿ ಶಾಲಾ ಚಟುವಟಿಕೆ ಪುನಾರಂಭ

ಬಂಟ್ವಾಳ: ಮೂಡನಡುಗೋಡು ಗ್ರಾಮದ ದಡ್ಡಲಕಾಡು ಸರಕಾರಿ  ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ  ತಾಲೂಕಿನಲ್ಲಿಯೇ ಅತ್ಯಧಿಕ ಸಂಖ್ಯೆ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು ಶಿಕ್ಷಣ ಇಲಾಖೆಯ ನಿರ್ದೇಶನದಂತೆ ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಶಾಲೆಯ ಚಟುವಟಿಕೆಗಳನ್ನು ಪುನಾರಂಭಿಸಲಾಗಿದೆ.‌

ತರಗತಿ ಪ್ರವೇಶಿಸುವ ಮೊದಲು ಸ್ಯಾನಿಟೈಜರ್ ಹಾಕಿ, ಒಂದು ಬೆಂಚಿನಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಮಾತ್ರ ಕುಳಿತು ಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಮುನ್ನೆಚ್ಚರಿಕೆಯಾಗಿ ಎಲ್ಲಾ  ಶಿಕ್ಷಕರರು ಹಾಗೂ ಶಿಕ್ಷಕೇತರ  ಸಿಬ್ಬಂದಿ ಗಳಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಬಳಿಕ ಶಾಲಾ ದತ್ತು  ಸಂಘಟನೆಯಾದ ಶ್ರೀ ದುರ್ಗಾ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಅಂಚನ್ ಅವರ ಅಧ್ಯಕ್ಷೆಯಲ್ಲಿ ಶಿಕ್ಷಕರು ಹಾಗೂ ಪೋಷಕರ ಸಭೆ ನಡೆಸಿ ಪೋಷಕರಿಗೆ ಸೂಕ್ತ ಸಲಹೆ, ಸೂಚನೆಗಳನ್ನು ನೀಡಲಾಯಿತು. ಈ ಸಂದರ್ಭ ಪ್ರೌಢಶಾಲಾ ವಿಭಾಗದ ಶಾಲಾಭಿವೃದ್ದಿ ಸಮಿತಿ ಕಾರ್ಯಧ್ಯಕ್ಷ ಪುರುಷೋತ್ತಮ ಅಂಚನ್, ಪ್ರಾಥಮಿಕ ವಿಭಾಗದ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ರಾಮಚಂದ್ರ ಪೂಜಾರಿ, ಮುಖ್ಯೋಪಾಧ್ಯಯರಾದ ಅನಿತಾ, ಮೌರೀಸ್, ಹಿಲ್ಡಾ ಫೆರ್ನಾಂಡೀಸ್ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ