ಬಂಟ್ವಾಳ

ಹೊಸ ವರ್ಷದ ಮೊದಲ ದಿನ ಶಾಲೆ ಪ್ರವೇಶಿಸಿದ ಮಕ್ಕಳಿಗೆ ಹೂ ನೀಡಿ ಸ್ವಾಗತಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಸುದೀರ್ಘ ಅವಧಿಯ ಬಳಿಕ ಹಲವು ಮುನ್ನೆಚ್ಚರಿಕೆಗಳೊಂದಿಗೆ ಶಾಲೆಗಳು ಆರಂಭಗೊಂಡಿವೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಸಾಮಾಜಿಕ ಅಂತರಗಳೊಂದಿಗೆ ತರಗತಿಯಲ್ಲಿ ಕುಳಿತುಕೊಂಡು ಪಾಠ ಕೇಳಲು ವ್ಯವಸ್ಥೆ ಕಲ್ಪಿಸಲಾಗಿದ್ದು, ಬಂಟ್ವಾಳದ ಹೈಸ್ಕೂಲುಗಳಲ್ಲಿ ಶಾಲಾರಂಭ ನಡೆಯಿತು. ಈ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಕೊಯ್ಲ ಸರಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಹೂವನ್ನು ನೀಡಿ ಸ್ವಾಗತಿಸಿ ಪೋಷಕರ ಸಭೆಯಲ್ಲಿ ಭಾಗವಹಿಸಿದರು.

ಕೊರೊನಾ ಕಾರಣದಿಂದ ಮುಚ್ಚಲ್ಪಟ್ಟ ಶಾಲೆಗಳು ಸುಮಾರು 10 ತಿಂಗಳುಗಳ ಬಳಿಕ ತೆರೆದಿದ್ದು ವಿದ್ಯಾರ್ಥಿಗಳು ಮುಂಜಾಗರೂಕತಾ ಕ್ರಮ ಅನುಸರಿಸಿ ತರಗತಿಗಳಲ್ಲಿ ನಿತ್ಯ ಚಟುವಟಿಕೆಗಳಲ್ಲಿ ಭಾಗವಹಿಸಿ ಈ ಶೈಕ್ಷಣಿಕ ವರ್ಷವನ್ನು ಸದುಪಯೋಗ ಪಡೆಯುವಂತೆ ತಿಳಿಸಿದರು. ಪೋಷಕರು ತಮ್ಮ ಮಕ್ಕಳ ಆರೋಗ್ಯದ ಬಗ್ಗೆ  ಭಯಭೀತರಾಗದೆ ಸರಕಾರ ತೆಗೆದುಕೊಳ್ಳುವ ಮುನ್ನೆಚ್ಚರಿಕೆಗಳನ್ನು ಪಾಲಿಸಿ ವಿದ್ಯಾರ್ಜನೆಗೆ ಮಕ್ಕಳನ್ನು ಪ್ರೋತ್ಸಾಹಿಸುವಂತೆ ಹೇಳಿದರು. ಶಿಕ್ಷಕರಿಗೆ ಈ ಬಾರಿ ತಮ್ಮ ಜವಬ್ದಾರಿ ಇನ್ನೂ ಹೆಚ್ಚಿದ್ದು ಮಕ್ಕಳ ಶೈಕ್ಷಣಿಕ ಪ್ರಗತಿಯೊಂದಿಗೆ ಅವರ ಆರೋಗ್ಯದ ಬಗ್ಗೆಯು ಗಮನ ಹರಿಸುವಂತೆ ಹೇಳಿದರು.

ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್,  ಬಂಟ್ವಾಳ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ದೇವದಾಸ ಶೆಟ್ಟಿ, ವಸಂತ ಕುಮಾರ್ ಅಣ್ಣಳಿಕೆ, ರಶ್ಮಿತ್ ಶೆಟ್ಟಿ ಕೈತ್ರೋಡಿ, ಪರಮೇಶ್ವರ ಪೂಜಾರಿ, ಸಂತೋಷ್ ರಾಯಿಬೆಟ್ಟು, ದುರ್ಗಾದಾಸ್ ಮಾವಂತೂರು, ಡೊಂಬಯ್ಯ ಅರಳ,  ರವಿಂದ್ರ ಪೂಜಾರಿ ಬದನಡಿ, ಉಮೇಶ್ ಅರಳ, ಶಾಲೆಯ ಮುಖ್ಯ ಶಿಕ್ಷಕ ಸಿಪ್ರಿಯಾನ್ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.