ಬಂಟ್ವಾಳ: ಭಾರತೀಯ ಜನತಾ ಪಾರ್ಟಿಯ ರಾಜ್ಯ ಎಸ್.ಸಿ.ಮೋರ್ಚಾದ ಕಾರ್ಯಕಾರಿಣಿ ಸದಸ್ಯರಾಗಿ ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ದಿನೇಶ್ ಅಮ್ಟೂರು ಅಯ್ಕೆ ಆಗಿದ್ದಾರೆ. ಬಂಟ್ವಾಳ ಕ್ಷೇತ್ರ ಶಾಸಕ ರಾಜೇಶ್ ನಾಯ್ಕ್ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ ಹಾಗೂ ಜಿಲ್ಲಾಧ್ಯಕ್ಷ ಸುದರ್ಶನ್ ಅವರ ಪ್ರಸ್ತಾವನೆಯಂತೆ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಸೂಚನೆಯಂತೆ ರಾಜ್ಯ ಎಸ್.ಸಿ.ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣ ಸ್ವಾಮಿ ನೇಮಕ ಮಾಡಿ ಅದೇಶ ಮಾಡಿದ್ದಾರೆ.
ಯುವ ರಾಜಕಾರಣಿ ಅಮ್ಟೂರು ಅವರು ಬೂತ್ ಸಮಿತಿ ಕಾರ್ಯದರ್ಶಿ, ಅಮ್ಟೂರು ಗ್ರಾ.ಸಮಿತಿ ಕಾರ್ಯದರ್ಶಿಯಾಗಿ, ವಿಟ್ಲ ವಿಧಾನಸಭಾ ಕ್ಷೇತ್ರದ ಸಮಿತಿ ಸದಸ್ಯರಾಗಿ, ಕಾರ್ಯದರ್ಶಿಯಾಗಿ, ಬಂಟ್ವಾಳ ಎಸ್.ಸಿ.ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ, ವಿಧಾನಸಭಾ ಕ್ಷೇತ್ರದ ಎರಡು ಬಾರಿ ಕಾರ್ಯದರ್ಶಿಯಾಗಿ, ಜಿಲ್ಲಾ ಎಸ್.ಸಿ.ಮೋರ್ಚಾದ ಜಿಲ್ಲಾಧ್ಯಕ್ಷರಾಗಿ , ಜಿಲ್ಲಾ ಕಾರ್ಯಕರಣಿ ಸದಸ್ಯರಾಗಿ ಪಕ್ಷ ಸಂಘಟನೆಯಲ್ಲಿ ಮುಂಚೂಣಿಯಲ್ಲಿದ್ದಾರೆ. ಜೊತೆಗೆ ವಿವಿಧ ಸಂಘಟನೆಗಳಲ್ಲಿ ಮತ್ತು ಸಾಮಾಜಿಕ ಸಾಂಸ್ಕೃತಿಕ ಶೈಕ್ಷಣಿಕ, ಧಾರ್ಮಿಕವಾಗಿ ತೊಡಗಿಸಿಕೊಂಡಿಸಿಕೊಂಡಿದ್ದಾರೆ.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…