

ಬಂಟ್ವಾಳ: ವಿಟ್ಲ ವಲಯ ಎಸ್ ಡಿ ಪಿ ಐ ಕಚೇರಿಗೆ ಕಿಡಿಗೇಡಿಗಳು ಬೆಂಕಿ ಹಾಕಿರುವ ಘಟನೆ ವಿಟ್ಲದ ಮೇಗಿನಪೇಟೆಯಲ್ಲಿ ನಡೆದಿರುವುದು ಸೋಮವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ, ಭಾನುವಾರ ರಾತ್ರಿ ಈ ಕೃತ್ಯ ನಡೆದಿದೆನ್ನಲಾಗಿದೆ. ಕಚೇರಿಯ ಮುಂಭಾಗದ ಬಾಗಿಲಿನ ಭಾಗಕ್ಕೆ ಬೆಂಕಿ ಹಚ್ಚಿದ್ದು, ಸ್ಥಳದಲ್ಲಿ ಪೈಂಟ್ ಡಬ್ಬಗಳು ಪತ್ತೆಯಾಗಿದ್ದು, ಪೈಂಟ್ ಹಚ್ಚಿ ಬೆಂಕಿ ಹಾಕಿದ್ದಾರೆಂಬ ಶಂಕೆ ವ್ಯಕ್ತವಾಗಿದೆ. ಇದರಿಂದ ಕಚೇರಿಯ ಮುಂಭಾಗ ಹಾನಿಗೊಂಡಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸಿದರು.

Be the first to comment on "ವಿಟ್ಲದ ಎಸ್.ಡಿ.ಪಿ.ಐ. ಕಚೇರಿ ಬಾಗಿಲಿಗೆ ಬೆಂಕಿ ಹಾಕಿರುವ ಘಟನೆ ಬೆಳಕಿಗೆ"