ಬಂಟ್ವಾಳ: ಸಾಧ್ಯವಿದ್ದರೆ ಗೋಮಾಂಸ ರಫ್ತು ಬ್ಯಾನ್ ಮಾಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸವಾಲೆಸೆದಿದ್ದಾರೆ.
ಬಂಟ್ವಾಳದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಪ್ರತಿನಿಧಿಗಳ ಮೈಸೂರು ವಿಭಾಗ ಮಟ್ಟದ ಸಂಕಲ್ಪ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರು, ಗೋವನ್ನ ಪೂಜಿಸುವ ಪದ್ಧತಿ ಮೊದಲಿನಿಂದಲೂ ಇದೆ. ಆದರೆ ಬಿಜೆಪಿ ಸರ್ಕಾರ ರಾಜಕೀಯ ಲಾಭಕ್ಕೋಸ್ಕರ ಇದನ್ನು ಮಾಡುತ್ತಿದೆ ಎಂದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವೈಯಕ್ತಿಕ ಅಭ್ಯಾಸಗಳ ಕುರಿತು ಮಾತನಾಡಿದ್ದು, ಅವರ ಸ್ವಂತ ಅಭಿಪ್ರಾಯವಾಗಿದೆ. ಅದರಿಂದ ಪಕ್ಷಕ್ಕೆ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ ಡಿಕೆಶಿ, ನಾವೆಲ್ಲ ಗೋಮಾತೆಗೆ ಗೌರವ ಕೊಡುತ್ತೇವೆ. ಇದು ನಮ್ಮ ಸಂಸ್ಕೃತಿ ಎಂದರು. ಹಸು ಎಲ್ಲ ಸಮುದಾಯಕ್ಕೂ ಸೇರಿದ್ದು. ಎಲ್ಲಾ ವರ್ಗದ ಮಂದಿಯೂ ಹೈನುಗಾರಿಕೆ ಮಾಡುತ್ತಾರೆ ಎಂದರು ಈ ಸಂದರ್ಭ ಮಾಜಿ ಸಚಿವ ಬಿ.ರಮಾನಾಥ ರೈ, ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ಉಪಸ್ಥಿತರಿದ್ದರು.
Be the first to comment on "ಬಂಟ್ವಾಳದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸುದ್ದಿಗಾರರಿಗೆ ಹೇಳಿದ್ದೇನು?"