ಬಂಟ್ವಾಳದಲ್ಲಿ ಬಿಜೆಪಿ ಜನಸೇವಕ ಸಮಾವೇಶಕ್ಕೆ ತಯಾರಿ, ಸಚಿವ ಈಶ್ವರಪ್ಪ ಸಹಿತ ಉನ್ನತ ನಾಯಕರು ಭಾಗಿ

ಬಂಟ್ವಾಳ: ಮೊನ್ನೆ ಕಾಂಗ್ರೆಸ್ ಸಮಾವೇಶ ಭರ್ಜರಿಯಾಗಿ ನಡೆದಿದ್ದರೆ, ಈಗ ಬಿಜೆಪಿ ಸಮಾವೇಶಕ್ಕೆ ಭರದ ತಯಾರಿ ನಡೆದಿದೆ. ಸೋಮವಾರ ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿ ಪಕ್ಕವೇ ಇರುವ ಬಂಟರ ಭವನದಲ್ಲಿ ಜಿಲ್ಲಾ ಮಟ್ಟದ ಜನಪ್ರತಿನಿಧಿಗಳು ಒಗ್ಗೂಡುವ ಜನಸೇವಕ ಸಮಾವೇಶಕ್ಕೆ ಭರದ ಸಿದ್ಧತೆ ನಡೆದಿದ್ದು, ಸಚಿವ ಈಶ್ವರಪ್ಪ, ಪಕ್ಷ ನಾಯಕರಾದ ಸಿ.ಟಿ.ರವಿ, ಅರವಿಂದ ಲಿಂಬಾವಳಿ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ ಮೂಡುಬಿದಿರೆ ಬಂಟ್ವಾಳದಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

11ರಂದು ಮಧ್ಯಾಹ್ನ 3 ಗಂಟೆಗೆ ಸುಮಾರು 3 ಸಾವಿರ ಮಂದಿ ಜನಪ್ರತಿನಿಧಿಗಳು ಭಾಗವಹಿಸುವ ಕಾರ್ಯಕ್ರಮಕ್ಕೆ ರಾಜ್ಯದ ಪ್ರಮುಖರಾದ ಸಚಿವ ಕೆ.ಎಸ್.ಈಶ್ವರಪ್ಪ, ಸಿ.ಟಿ.ರವಿ, ರವಿಕುಮಾರ್, ರಾಜ್ಯ ಉಪಾಧ್ಯಕ್ಷ ಅರವಿಂದ ಲಿಂಬಾವಳಿ ಸಹಿತ ಪಕ್ಷದ ಉನ್ನತ ನಾಯಕರು ಭಾಗವಹಿಸಲಿರುವರು. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಪಕ್ಷದ ಜಿಲ್ಲೆಯ ಎಲ್ಲ ಶಾಸಕರು ಉಪಸ್ಥಿತರಿರುವರು ಎಂದು ಸುದರ್ಶನ ಹೇಳಿದರು.

ಗೆದ್ದವರು ಜನಸೇವಕರಾಗಿ ಕೆಲಸ ಮಾಡಬೇಕು ಹಾಗೂ ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿ ಮುನ್ನಡೆಯಬೇಕು ಎಂಬ ನಿಟ್ಟಿನಲ್ಲಿ ಜನಸೇವಕ ಸಮಾವೇಶವನ್ನು ಇಡೀ ರಾಜ್ಯದಲ್ಲಿ ಹಮ್ಮಿಕೊಳ್ಳಲಾಗಿದೆ. ರಾಜ್ಯದಲ್ಲಿ 5 ತಂಡಗಳು 37 ಸಂಘಟನಾ ಜಿಲ್ಲೆಗೆ ಪ್ರವಾಸ ಮಾಡಲಿದ್ದಾರೆ. ಜಿಲ್ಲೆಗೆ ಬಂಟ್ವಾಳ ಕೇಂದ್ರಸ್ಥಾನ. ಈ ಹಿನ್ನೆಲೆಯಲ್ಲಿ ಈ ಭಾಗದಲ್ಲಿ ಶಾಸಕ ರಾಜೇಶ್ ನಾಯ್ಕ್ ಅಧ್ಯಕ್ಷತೆಯಲ್ಲಿ ಜಿಲ್ಲೆ ಸಮಾವೇಶವನ್ನು ವ್ಯವಸ್ಥಿತವಾಗಿ ಮಾಡಲಾಗುವುದು ಎಂದರು. ಜಿಲ್ಲೆಯ 145 ಗ್ರಾಪಂಗಳಲ್ಲಿ ಬಿಜೆಪಿ ಬೆಂಬಲಿತರು ಗೆಲುವು ಸಾಧಿಸಿದರೆ, ಅತಂತ್ರ, ಸಮಬಲ ಇರುವ 28 ಪಂಚಾಯಿತಿಗಳಲ್ಲಿ 15 ಬಿಜೆಪಿ ಬೆಂಬಲಿತರಿಗೆ ದೊರಕಲಿದೆ ಎಂದು ಹೇಳಿದರು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ ಬಂಟ್ವಾಳ, ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ, ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ಡೊಂಬಯ ಅರಳ, ರವೀಶ ಶೆಟ್ಟಿ ಕರ್ಕಳ, ಮಾಧ್ಯಮ ಪ್ರಮುಖ್ ರಂಜಿತ್ ಮೈರ ಉಪಸ್ಥಿತರಿದ್ದರು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಂಟ್ವಾಳದಲ್ಲಿ ಬಿಜೆಪಿ ಜನಸೇವಕ ಸಮಾವೇಶಕ್ಕೆ ತಯಾರಿ, ಸಚಿವ ಈಶ್ವರಪ್ಪ ಸಹಿತ ಉನ್ನತ ನಾಯಕರು ಭಾಗಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*