ಬಂಟ್ವಾಳ

ಒಡಿಯೂರು ಶ್ರೀಗುರುದೇವಾನಂದ ಸ್ವಾಮೀಜಿಯವರ ಷಷ್ಟ್ಯಬ್ದ ಸಂಭ್ರಮ ತಾಲೂಕು ಸಮಿತಿ ಸಭೆ

ಬಂಟ್ವಾಳ:ಒಡಿಯುರು ಶ್ರೀ ಗುರುದೇವಾನಂದ ಸ್ವಾಮೀಜಿಯವರ ಷಷ್ಠ್ಯಬ್ದ ಸಂಭ್ರಮದ ಅಂಗವಾಗಿ ಬಂಟ್ವಾಳ ತಾಲೂಕು ಸಮಿತಿ ಘೋಷಣೆ, ಪದಗ್ರಹಣ ಹಾಗೂ ಪೂರ್ವಭಾವಿ ಸಭೆ ಬಿ.ಸಿ.ರೋಡಿನ ಹೊಟೇಲ್ ರಂಗೋಲಿ ಸಭಾಂಗಣದಲ್ಲಿ ಭಾನುವಾರ ನಡೆಯಿತು.

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಂನ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಿ ಕಾರ್ಯಕ್ರಮದಲ್ಲಿ  ಕೃಷಿ ಬದುಕಿಗೆ ಪೂರಕವಾಗಿರುವ ಗೋಸಮ್ಮೇಳನವನ್ನು ಬಂಟ್ವಾಳ ಘಟಕ ಆಯೋಜಿಸಿದ್ದು ಶ್ಲಾಘನಾರ್ಹ, ಧರ್ಮಸಂಸ್ಕೃತಿಯ ಅನಾವರಣ ದುಶ್ಚಟಮುಕ್ತ ಸಮಾಜ ನಿರ್ಮಾಣ ಆಗಲಿ, ಋಷಿ, ಕೃಷಿ ಸಂಸ್ಕೃತಿ ಬೆಳಯಲಿ ಎಂದರು. ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಸ್ವಾಮೀಜಿ ಒಡಿಯೂರು ಕ್ಷೇತ್ರದೊಂದಿಗಿನ ನಿಕಟ ಬಾಂಧವ್ಯವನ್ನು ಸ್ಮರಿಸಿ, ಕಾರ್ಯಕ್ರಮಕ್ಕೆ ಶುಭ ಕೋರಿದರು.ಷಷ್ಟ್ಯಬ್ದ ಸಂಭ್ರಮ ಸಮಿತಿಯ ಒಡಿಯೂರು ಕೇಂದ್ರ ಸಮಿತಿಯ ಗೌರವಾಧ್ಯಕ್ಷರಾದ ಸಾಧ್ವಿ ಮಾತಾನಂದಮಯೀ ಆಶೀರ್ಚನ ನೀಡಿದರು.

ಕೇಂದ್ರ ಸಮಿತಿ ಅಧ್ಯಕ್ಷ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಎಂ.,ಮೋಹನ ಆಳ್ವ ಮಾತನಾಡಿ, ಸಮಾರಂಭವನ್ನು ಸಮಾಜಮುಖಿಯನ್ನಾಗಿಸುವ ಕುರಿತು ತಿಳಿಸಿದರು. ಕೇಂದ್ರ ಸಮಿತಿ ಕಾರ್ಯಾಧ್ಯಕ್ಷ ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ಪ್ರಧಾನ ಕಾರ್ಯದರ್ಶಿ ನವನೀತ ಶೆಟ್ಟಿ ಕದ್ರಿ, ಸಂಘಟನಾ ಕಾರ್ಯದರ್ಶಿ ಚಂದ್ರಹಾಸ ಡಿ.ಶೆಟ್ಟಿ ರಂಗೋಲಿ, ಕೋಶಾಧಿಕಾರಿ ಸುರೇಶ್ ರೈ ಮಕರಜ್ಯೋತಿ, ಬಂಟ್ವಾಳ ತಾಲೂಕು ಸಮಿತಿ ಗೌರವಾಧ್ಯಕ್ಷರಾಗಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಅಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ, ಕಾರ್ಯಾಧ್ಯಕ್ಷ ಡಾ. ತುಕಾರಾಮ ಪೂಜಾರಿ ಗೌರವ ಮಾರ್ಗದರ್ಶಕರಾದ ಮಾಜಿ ಸಚಿವ ಬಿ.ರಮಾನಾಥ ರೈ ಶುಭ ಹಾರೈಸಿದರು. ವಲಯ ಸಂಚಾಲಕರಾದ ಅಶೋಕ್ ಶೆಟ್ಟಿ ಸರಪಾಡಿ ಏಪ್ರಿಲ್ 4ರಂದು ಬಂಟ್ವಾಳದಲ್ಲಿ ಬೃಹತ್ ಗೋಸಮ್ಮೇಳನ ನಡೆಯುವ ಕುರಿತು ವಿವರ ನೀಡಿದರು. ಕೇಂದ್ರ ಸಮಿತಿ ಕಾರ್ಯಧ್ಯಕ್ಷ ಪದ್ಮನಾಭ ಕೊಟ್ಟಾರಿ ಸ್ವಾಗತಿಸಿದರು. ಸಂಯೋಜಕ ಎಚ್. ಕೆ. ನಯನಾಡು ಕಾರ್ಯಕ್ರಮ ನಿರೂಪಿಸಿದರು. ವಲಯ ಸಂಚಾಲಕ  ರಾಮದಾಸ ಬಂಟ್ವಾಳ ವಂದಿಸಿದರು.ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್ ಶೆಟ್ಟಿ ಮುಂಡ್ರೆಲ್ಗುತ್ತು,  ಯೋಜನಾ ಸಂಘಟಕ ಮಂಜು ವಿಟ್ಲ, ಕೋಶಾಧಿಕಾರಿ ಸುಭಾಶ್ಚಂದ್ರ ಜೈನ್, ಸಹಕೋಶಾಧಿಕಾರಿ ವಸಂತ ಶೆಟ್ಟಿ ಕೇದಿಗೆ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ