ಬಂಟ್ವಾಳ: ಯುವವಾಹಿನಿ ಮೂಲಕ ಸಮಾಜಮುಖಿ ಕಾರ್ಯ ನಡೆಸುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಮೆಲ್ಕಾರ್ ನಲ್ಲಿ ಭಾನುವಾರ ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಪದಗ್ರಹಣ ಹಾಗೂ ವಿದ್ಯಾರ್ಥಿ ಪುರಸ್ಕಾರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ದ.ಕ. ಜಿಲ್ಲಾ ಮೂರ್ತೆದಾರರ ಮಹಾಮಂಡಲ ಅಧ್ಯಕ್ಷ ಕೆ.ಸಂಜೀವ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿದರು. 2020-21ನೇ ಸಾಲಿನ ಸುಂದರ ಪೂಜಾರಿ ಬೋಳಂಗಡಿ ನೇ ನೇತೃತ್ವದ ಯುವವಾಹಿನಿ ಬಂಟ್ವಾಳ ಘಟಕದ ನೂತನ ಪದಾಧಿಕಾರಿಗಳಿಗೆ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಡಾ.ರಾಜಾರಾಮ್ ಕೆ.ಬಿ ಪ್ರತಿಜ್ಞಾ ವಿಧಿ ಬೋಧಿಸಿದರು.
ಯುವವಾಹಿನಿ ಕೇಂದ್ರ ಸಮಿತಿಯ ನೂತನ ಸಲಹೆಗಾರರಾಗಿ ಆಯ್ಕೆಯಾದ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಅವರನ್ನು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಭಿನಂದಿಸಿದರು. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.90ಕ್ಕಿಂತ ಅಧಿಕ ಅಂಕ ಗಳಿಸಿದ ಬಂಟ್ವಾಳ ತಾಲೂಕಿನ 32 ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ.ತುಕರಾಮ ಪೂಜಾರಿ, ಬಂಟ್ವಾಳ ಪೊಲೀಸ್ ಇನ್‌ಸ್ಪೆಕ್ಟರ್ ಟಿ.ಡಿ.ನಾಗರಾಜ್ ಅವರನ್ನು ವಿಶೇಷ ಸಾಧನೆಗಾಗಿ ಸನ್ಮಾನಿಸಲಾಯಿತು. ಚಾಂದಿನಿ ಪ್ರಮೋದ್, ಸಂದೀಪ್ ಹಾಗೂ ಗೋಪಾಲಕೃಷ್ಣ ಬಂಗೇರ ಅವರನ್ನು ಅಭಿನಂದಿಸಲಾಯಿತು. ನೃತ್ಯ ಕ್ಷೇತ್ರದಲ್ಲಿ ವಿಶಿಷ್ಟ ಸಾಧಕಿ ಸಾನಿಕಾಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಜಯ ಗಳಿಸಿದ ಯುವವಾಹಿನಿ ಬಂಟ್ವಾಳ ಘಟಕ ಸದಸ್ಯರಾದ ಜಯಶ್ರೀ ಕರ್ಕೇರ, ಸುನೀಲ್ ಕಾಯರ್ ಮಾರ್ ಅವರನ್ನು ಗೌರವಿಸಲಾಯಿತು. ಕರೊನಾ ಮಹಾಮಾರಿಯ ನಡುವೆಯೂ ಬಂಟ್ವಾಳ ಘಟಕ ಕಳೆದೊಂದು ವರ್ಷದಲ್ಲಿ ನಡೆದ ಸಮಾಜಮುಖಿ ಕಾರ್ಯಗಳಿಗೆ ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಲಾಯಿತು. ಕರೊನಾ ಮಹಾಮಾರಿಯ ನಡುವೆಯೂ ಬಂಟ್ವಾಳ ಘಟಕ ಕಳೆದೊಂದು ವರ್ಷದಲ್ಲಿ ನಡೆದ ಸಮಾಜಮುಖಿ ಕಾರ್ಯಗಳಿಗೆ ಸಹಕಾರ ನೀಡಿದ ಎಲ್ಲರಿಗೂ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ಇಂದಿರೇಶ್ ಬಿ ಕೃತಜ್ಞತೆ ಸಲ್ಲಿಸಿದರು. ವಿವಿಧ ಘಟಕಗಳಿಂದ ಆಗಮಿಸಿದ ಪದಾಧಿಕಾರಿಗಳು ಹಾಗೂ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಗೌರವಿಸಲಾಯಿತು. ಬಿ.ಎಸ್.ಎನ್.ಡಿ.ಪಿ ಗೌರವ ಸಲಹೆಗಾರ ಸತ್ಯಜಿತ್ ಸುರತ್ಕಲ್, ಬ್ರಹ್ಮಶ್ರೀ ನಾರಾಯಣಗುರು ಧರ್ಮಪರಿಪಾಲನಾ ಸಂಘದ ರಾಜ್ಯಾಧ್ಯಕ್ಷ ಸೈದಪ್ಪ ಕೆ.ಗುತ್ತೆದಾರ್, ಸಮಗ್ರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಶ್ರೀಲತಾ ಎಸ್., ಉದ್ಯಮಿ ಹರೀಶ್ ಪೂಜಾರಿ, ಯುವವಾಹಿನಿ ಕೇಂದ್ರ ಸಮಿತಿ ಉಪಾಧ್ಯಕ್ಷ ರಾಜೇಶ್ ಬಿ. ಭಾಗವಹಿಸಿದ್ದರು. ಘಟಕದ ಮಾಜಿ ಅಧ್ಯಕ್ಷ ಶಿವಾನಂದ ಎಂ. ನೂತನ ಪದಾಧಿಕಾರಿಗಳನ್ನು ಪರಿಚಯಿಸಿದರು. ಕಾರ್ಯದರ್ಶಿ ಪುರುಷೋತ್ತಮ ಕಾಯರ್ ಪಲ್ಕೆ ವಾರ್ಷಿಕ ವರದಿ ಮಂಡಿಸಿದರು. ಯುವವಾಹಿನಿ ಬಂಟ್ವಾಳ ಘಟಕದ ಮಾಜಿ ಅಧ್ಯಕ್ಷ ಲೋಕೇಶ್ ಸುವರ್ಣ ಅಲೆತ್ತೂರು ಸ್ವಾಗತಿಸಿದರು. ಮಾಜಿ ಅಧ್ಯಕ್ಷ ಟಿ.ಶಂಕರ ಸುವರ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು, ಕಾರ್ಯದರ್ಶಿ ನಾರಾಯಣ ಅಮೀನ್ ವಂದಿಸಿದರು. ದಿನೇಶ್ ಸುವರ್ಣ ರಾಯಿ ಕಾರ್ಯಕ್ರಮ ನಿರೂಪಿಸಿದರು
Be the first to comment on "ಯುವವಾಹಿನಿಯಿಂದ ಸಮಾಜಮುಖಿ ಕಾರ್ಯ: ಕೋಟ ಶ್ರೀನಿವಾಸ ಪೂಜಾರಿ"