ಬಂಟ್ವಾಳ

ದೇಶದ್ರೋಹಿಗಳಿಗೆ ಕಾದಿದೆ ಕಠಿಣ ಕ್ರಮ – ಜನಸೇವಕ ಸಮಾವೇಶದಲ್ಲಿ ಸಚಿವ ಈಶ್ವರಪ್ಪ

ಬಂಟ್ವಾಳ: ಪಾಕ್ ಪರ ಘೋಷಣೆ ಕೂಗುವ ದೇಶದ್ರೋಹಿಗಳ ವಿರುದ್ಧ ಕಠಿಣ ಕ್ರಮವನ್ನು ರಾಜ್ಯ ಸರ್ಕಾರ ಕೈಗೊಳ್ಳುತ್ತದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಬ್ರಹ್ಮರಕೂಟ್ಲುವಿನಲ್ಲಿರುವ ಬಂಟವಾಳ ಬಂಟರ ಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಜನಸೇವಕ ಸಮಾವೇಶವನ್ನು ಗೋಪೂಜೆ ನೆರವೇರಿಸಿ, ಬಳಿಕ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.,

ಸಿದ್ದರಾಮಯ್ಯ ಅವರನ್ನು ತನ್ನ ಭಾಷಣದುದ್ದಕ್ಕೂ ಟೀಕಿಸಿದ ಈಶ್ವರಪ್ಪ, ಅವರಿಗೆ ನಿದ್ದೆಯಲ್ಲೂ ನಳಿನ್ ಕಾಣಿಸುತ್ತಾರೆ ಎಂದರು. ಗೋಮಾತೆಯನ್ನು ಹಂಗಿಸಿದ ಪಾರ್ಟಿಗಳು ನೆಲಕಚ್ಚಿವೆ, ಅವರಿಗೆ ಗೋಶಾಪ ತಟ್ಟಿದ ಫಲವೇ ಸಿಎಂ ಹುದ್ದೆಯಿಂದ ಕೆಳಗಿಳಿದಿದ್ದಾರೆ ಎಂದು ಟೀಕಿಸಿದರು.

ಜಾಹೀರಾತು

ಗ್ರಾಪಂಗಳಿಗೆ ನೆರವು: ಎಲ್ಲ ಗ್ರಾಪಂ ಕಟ್ಟಡಗಳಿಗೆ ಸೋಲಾರ್ ದೀಪ, ಅಂಗನವಾಡಿ ಕಟ್ಟಡಗಳ ರಿಪೇರಿ ಮಾಡಲು ಅನುದಾನ ದೊರಕುವುದು ಎಂದ ಈಶ್ವರಪ್ಪ, ಗ್ರಾಪಂ ಸದಸ್ಯರು ತಮಗೆ ನೀಡುವ ತರಬೇತಿಗೆ ತಪ್ಪದೆ ತೆರಳಿ, ಜನಕಲ್ಯಾಣಕ್ಕೆ ಪೂರಕವಾಗಿ ಕೆಲಸ ಮಾಡಬೇಕು ಎಂದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಎಂ. ಅಧ್ಯಕ್ಷತೆ ವಹಿಸಿ ಮಾತನಾಡಿ,  ಜನವರಿ 15, 16, 17ರಂದು ನಡೆಯುವ ರಾಮ ಮಂದಿರ ಅಭಿಯಾನಕ್ಕೆ ಕಾರ್ಯಕರ್ತರು ಸಹಕರಿಸಬೇಕು ಎಂದು ಕರೆ ನೀಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಪಂಚಾಯತ್ ಸದಸ್ಯರು ಕ್ರಿಯಾಶೀಲತೆಯೊಂದಿಗೆ ಹಳ್ಳಿ‌ ಸರಕಾರದಂತೆ ಕಾರ್ಯನಿರ್ವಹಿಸಬೇಕು. ಇದಕ್ಕೆ ಪೂರಕವಾಗಿ ಜಾತಿ‌ ಮತ್ತು ಆದಾಯ ಪ್ರಮಾಣ ಪತ್ರವನ್ನು ಗ್ರಾಮ ಮಟ್ಟದಲ್ಲಿಯೇ ವಿತರಿಸಲು ಸರಕಾರ ಕ್ರಮಕೈಗೊಳ್ಳಲಿದೆ ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯತ್ ಸದಸ್ಯರಿಗೆ ನಡೆಯಲಿರುವ ತರಬೇತಿಯನ್ನು ಎಲ್ಲಾ ಸದಸ್ಯರು ಪಡೆದು ಸದಸ್ಯರ ಕಾರ್ಯನೀತಿಯ ಬಗ್ಗೆ ತಿಳಿದುಕೊಳ್ಳುವುದು ಅಗತ್ಯ ಎಂದರು.

ರಾಜ್ಯಸಭಾ ಸದಸ್ಯರಾದ ಈಡಣ್ಣ ಕಡಾಡಿ, ರವಿಕುಮಾರ್, ಶಾಸಕರಾದ ಎಸ್.ಅಂಗಾರ, ಉಮಾನಾಥ ಕೋಟ್ಯಾನ್, ರಾಜೇಶ್ ನಾಯ್ಕ್, ಡಾ. ವೈ.ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಹರೀಶ್ ಪೂಂಜಾ, ಸಂಜೀವ ಮಠಂದೂರು, ವಿಧಾನಪರಿಷತ್ತು ಸದಸ್ಯ ಪ್ರತಾಪ್ ಸಿಂಹ ನಾಯಕ್, ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಎಂಎಸ್ ಐಎಲ್ ಅಧ್ಯಕ್ಷ ಸಂತೋಷ್ ಕುಮಾರ್ ಬೋಳಿಯಾರ್, ಪ್ರಮುಖರಾದ ನಿತಿನ್ ಕುಮಾರ್, ಸುದೇಶ್ ಶೆಟ್ಟಿ, ರಾಮದಾಸ ಬಂಟ್ವಾಳ, ಕಸ್ತೂರಿ ಪಂಜ, ಉದಯಕುಮಾರ ಶೆಟ್ಟಿ, ಭಾರತೀಶ್ ,ರಾಜೇಶ್ ಕಾವೇರಿ ಉಪಸ್ಥಿತರಿದ್ದರು. ಅಧ್ಯಕ್ಷತೆಯನ್ನು ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ ವಹಿಸಿದ್ದರು. ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ ಸ್ವಾಗತಿಸಿದರು. ಪುತ್ತೂರು ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ವಂದಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ ಬಂಟ್ವಾಳ ವಂದಿಸಿದರು. ಬುಡಾ ಅಧ್ಯಕ್ಷ ದೇವದಾಸ ಶೆಟ್ಟಿ ವಂದೇ ಮಾತರಂ ಹಾಡಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts