ಬಂಟ್ವಾಳ: ಟೋಲ್ ಸಂಗ್ರಹವನ್ನು ಕೂಡಲೇ ನಿಲ್ಲಿಸುವಂತೆ ಆಗ್ರಹಿಸಿ ಸಮಾನ ಮನಸ್ಕ ಸಂಘಟನೆಗಳ ಸಮನ್ವಯ ಸಮಿತಿ ಬಂಟ್ವಾಳ ತಾಲೂಕು ನೇತೃತ್ವದಲ್ಲಿ ಹಾಗೂ ವಿವಿಧ ವಾಹನ ಚಾಲಕ ಮಾಲಕ ಸಂಘಟನೆಗಳಾದ ದ.ಕ ಜಿಲ್ಲಾ ಟೂರಿಸ್ಟ್ ಕಾರು ಮತ್ತು ವ್ಯಾನು ಚಾಲಕರ ಸಂಘ(ರಿ) ಬಂಟ್ವಾಳ, ಸಣ್ಣ ಮತ್ತು ದೊಡ್ಡ ಗೂಡ್ಸ್ ಟೆಂಪೋ ಚಾಲಕರ ಸಂಘ ಬಂಟ್ವಾಳ, ಜಿತೋ ಕಾರು ಚಾಲಕ ಮಾಲಕರ ಸಂಘ ಬಂಟ್ವಾಳ ತಾಲೂಕು ಇವರುಗಳ ಸಹಭಾಗಿತ್ವದಲ್ಲಿ 19ನೇ ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಬ್ರಹ್ಮರಕೂಟ್ಲು ಟೋಲ್ ಗೇಟ್ ಬಳಿ ಪ್ರತಿಭಟನೆ-ಧರಣಿ ನಡೆಸಲು ತೀರ್ಮಾನಿಸಲಾಗಿದೆ.
ನ್ಯಾಯ ಸಮ್ಮತ ಈ ಹೋರಾಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಸಂಘಟನೆಯ ಅಧ್ಯಕ್ಷ ಬಿ.ಎಂ.ಪ್ರಭಾಕರ ದೈವಗುಡ್ಡೆ, ಪ್ರಧಾನ ಕಾರ್ಯದರ್ಶಿ ಬಿ.ಶೇಖರ್ ಪತ್ರಿಕಾ ಪ್ರಕಟಣೆ ಹೇಳಿಕೆ ನೀಡಿ ತಿಳಿಸಿದ್ದಾರೆ.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…