Uncategorized

ರಾಜ್ಯದಲ್ಲಿ 10 ಲಕ್ಷ ಮನೆಗಳ ನಿರ್ಮಾಣಕ್ಕೆ ಯೋಜನೆ: ವಸತಿ ಸಚಿವ ವಿ.ಸೋಮಣ್ಣ

ಬಂಟ್ವಾಳ: ಕಳೆದ ಆರೇಳು ವರ್ಷಗಳಿಂದ  ರಾಜ್ಯದಲ್ಲಿ ವ ಸತಿ ಯೋಜನೆಗಳು ಸಂಪೂರ್ಣ ಹದಗೆಟ್ಟು ಹೋಗಿದ್ದು, ಅನುದಾನವನ್ನೇ ಇಟ್ಟಿರಲಿಲ್ಲ. ಇಡೀ ರಾಜ್ಯದಲ್ಲಿ ೧೦ ಲಕ್ಷ ಮನೆಗಳ ನಿರ್ಮಾಣಕ್ಕೆ ಯೋಜನೆ ಕಲ್ಪಿಸಲಾಗುವುದು ಹಾಗೂ ಈ ವರ್ಷದ ಜುಲೈ ತಿಂಗಳೊಳಗೆ 97 ಸಾವಿರ ಕುಟುಂಬಗಳಿಗೆ ನಿವೇಶನ ಹಂಚಲಾಗುತ್ತದೆ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

ಶುಕ್ರವಾರ ಬಂಟ್ವಾಳದ ನರಿಕೊಂಬು ಶ್ರೀ  ವೀರಭದ್ರ ಕ್ಷೇತ್ರಕ್ಕೆ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಒಟ್ಟು 10 ಲಕ್ಷ ಮನೆಗಳ ಗುರಿ ಇದೆ.  ೩೫೬೦ ಎಕರೆಗೂ ಮಿಕ್ಕಿ ಗ್ರಾಮಾಂತರ ಪ್ರದೇಶಗಳಲ್ಲಿ ನಿವೇಶನ ಹಂಚಿಕೆಗೆ ಜಾಗ ಖರೀದಿಸಲಾಗಿದ್ದು, ಅಲ್ಲಿ ಮೂಲಸೌಕರ್ಯಕ್ಕೆ ಬೇಕಾದ ಅನುದಾನವನ್ನು ಬಜೆಟ್ ನಲ್ಲಿ ಸೇರ್ಪಡೆ ಮಾಡಲಾಗುತ್ತದೆ ಎಂದರು. ವಸತಿ ಯೋಜನೆಯಲ್ಲಿನ ಎಲ್ಲಾ ಅವ್ಯವಹಾರಗಳ ವಿರುದ್ಧ ಕ್ರಮಕೈಗೊಳ್ಳುವ ಕೆಲಸ ಮಾಡಿದ್ದೇನೆ ಎಂದ ಅವರು, ದ.ಕ., ಉತ್ತರ ಕನ್ನಡ ಭಾಗದಲ್ಲಿ ವಸತಿ ಯೋಜನೆಯಲ್ಲಿ ಹೆಚ್ಚಿನ ಅವ್ಯವಹಾರ ನಡೆಯದೇ ಇರುವುದು ಹೆಮ್ಮೆಯ ಸಂಗತಿ ಎಂದರು. ೮೫೦೦ಕ್ಕೂ ಅಧಿಕ ಎಕರೆ ಜಾಗದಲ್ಲಿ ಸ್ಲಮಗಳಲ್ಲಿ ವಾಸಿಸುವ ೩.೧೨ ಲಕ್ಷ ಕುಟುಂಬಗಳಿಗೆ ಶೀಘ್ರದಲ್ಲಿ ಹಕ್ಕುಪತ್ರಗಳನ್ನು ವಿತರಿಸಲಾಗುತ್ತದೆ ಎಂದರು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಜತೆಗಿದ್ದರು

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಬಿ.ವಿ.ಕಾರಂತ ಹುಟ್ಟಿದ ತಾಲೂಕಲ್ಲಿ ಸುಸಜ್ಜಿತ ರಂಗಮಂದಿರವೇ ಇಲ್ಲ

| ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲು ಪರದಾಟ | ತಾಲೂಕು ಕೇಂದ್ರದಲ್ಲಿ ಜಾಗವೇ ದೊರಕಿಲ್ಲ (more…)

12 hours ago