ಬಂಟ್ವಾಳ: ಇಲ್ಲಿನ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಘಟಕ ಸಹಯೋಗದಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಕಾಮಾಜೆಯಲ್ಲಿ ವಿವೇಕಾನಂದರ 158ನೇ ಜಯಂತಿ ಪ್ರಯುಕ್ತ ಕಾಲೇಜು ಸಭಾಂಗಣದಲ್ಲಿ ವಿವೇಕಾ ಸಂದೇಶ 2021 ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಗಳಾಗಿ ಮಾತನಾಡಿದ ನ್ಯಾಯವಾದಿ ಪ್ರಸಾದ್ ಕುಮಾರ್ ರೈ, ಅಧ್ಯಯನ ಶೀಲ, ಕ್ರಾಂತಿಕಾರಿ ಸನ್ಯಾಸಿ ಸ್ವಾಮಿ ವಿವೇಕಾನಂದರು ಕೆಲವೇ ವರ್ಷ ಬದುಕಿದ್ದರೂ ಕೂಡಾ, ಬಹಳಷ್ಟು ಚಿಂತನೆಗಳನ್ನು ಈ ದೇಶದ ಜನರಿಗೆ ನೀಡಿದ್ದಾರೆ ಎಂದರು ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಿನ್ಸಿಪಾಲ್ ಪೊ. ಗಿರೀಶ್ ಭಟ್ ಅಜಕ್ಕಳ ಮಾತಾಡಿ ಇಂಥ ಕಾರ್ಯಕ್ರಮಗಳು ವಿವೇಕಾನಂದರನ್ನು ಮತ್ತಷ್ಟು ತಿಳಿಯಲು ಸಹಕಾರಿಯಾಗಿದೆ ಎಂದರು. ಎಬಿವಿಪಿ ಬಂಟ್ವಾಳ ನಗರ ಕಾರ್ಯದರ್ಶಿ ನಾಗರಾಜ್ ಶೆಣೈ ಉಪಸ್ಥಿತರಿದ್ದರು. ವಿದ್ಯಾರ್ಥಿ ಪರಿಷತ್ ನ ವತಿಯಿಂದ ಹಮ್ಮಿಕೊಂಡಿದ್ದ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಪರಿಷತ್ ನ ಪ್ರಮುಖರು ಹಾಗೂ ಕಾಲೇಜಿನ ಅಧ್ಯಾಪಕರೂ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪ್ರಾಧ್ಯಾಪಕರಾದ ಶಶಿಕಲಾ ಸ್ವಾಗತಿಸಿ, ವಿದ್ಯಾರ್ಥಿನಿ ಭಿಂದು ವಂದಿಸಿದರು. ಸುಶ್ಮಿತಾ ಕಾರ್ಯಕ್ರಮ ನಿರೂಪಿಸಿದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…