ಬಂಟ್ವಾಳ: ಮುಂಬಯಿ ಮೂಲದ ಆಲ್ಕಾರ್ಗೋ ಲಾಜಿಸ್ಟಿಕ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜು ಬಿ.ಮೂಡದ 25 ವಿದ್ಯಾರ್ಥಿಗಳಿಗೆ ನೀಡಿದ ರೂ. 98 ಸಾವಿರಕ್ಕೂ ಅಧಿಕ ಮೊತ್ತದ ವಿದ್ಯಾರ್ಥಿವೇತನದ ಚೆಕ್ ಗಳನ್ನು ವಿತರಿಸಲಾಯಿತು.
ವಿದ್ಯಾರ್ಥಿವೇತನ ವಿತರಿಸಿ ಮಾತನಾಡಿದ ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷೆ ರಜನಿ ಚಿಕ್ಕಯ್ಯಮಠ ವಿದ್ಯಾರ್ಥಿಗಳು ಈ ಹಣವನ್ನು ಸದುಪಯೋಗ ಪಡೆದುಕೊಳ್ಳಬೇಕು ಮಾತ್ರವಲ್ಲ ಮುಂದೆ ಇದೇ ರೀತಿಯ ಸಮಾಜಮುಖಿ ಕಾರ್ಯಗಳ ಮೂಲಕ ಈ ಹಣದ ಋಣತೀರಿಸುವ ಕೆಲಸ ಮಾಡಬೇಕೆಂದು ಕಿವಿಮಾತು ಹೇಳಿದರು. ಕಾಲೇಜಿನ ಪ್ರಿನ್ಸಿಪಾಲ್ ಯೂಸುಫ್ ವಿಟ್ಲ ಕಾಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅಭಿವೃದ್ಧಿ ಸಮಿತಿ ಸದಸ್ಯೆ ಸುಜಾತ, ಉಪನ್ಯಾಸಕರಾದ ಲಕ್ಷೀ ಆಚಾರ್ಯ, ಸಾಝಿಯಾ ಉಪಸ್ಥಿತರಿದ್ದರು. ಆಂಗ್ಲ ಭಾಷಾ ಉಪನ್ಯಾಸಕ ದಾಮೋದರ ರಾಮಕುಂಜ ಸ್ವಾಗತಿಸಿದರು. ಅರ್ಥಶಾಸ್ತ್ರ ಉಪನ್ಯಾಸಕ ಬಾಲಕೃಷ್ಣ ನಾಯ್ಕ್ ವಂದಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ ನಿರೂಪಿಸಿದರು.
Be the first to comment on "ಬಿ.ಮೂಡ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ವಿದ್ಯಾರ್ಥಿವೇತನ ಚೆಕ್ ವಿತರಣೆ"