ಬಂಟ್ವಾಳ

ಬಿ.ಮೂಡ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ವಿದ್ಯಾರ್ಥಿವೇತನ ಚೆಕ್ ವಿತರಣೆ

ಬಂಟ್ವಾಳ: ಮುಂಬಯಿ ಮೂಲದ ಆಲ್ಕಾರ್ಗೋ ಲಾಜಿಸ್ಟಿಕ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜು ಬಿ.ಮೂಡದ 25 ವಿದ್ಯಾರ್ಥಿಗಳಿಗೆ ನೀಡಿದ ರೂ. 98 ಸಾವಿರಕ್ಕೂ ಅಧಿಕ ಮೊತ್ತದ ವಿದ್ಯಾರ್ಥಿವೇತನದ ಚೆಕ್ ಗಳನ್ನು ವಿತರಿಸಲಾಯಿತು.

 ವಿದ್ಯಾರ್ಥಿವೇತನ ವಿತರಿಸಿ ಮಾತನಾಡಿದ ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷೆ  ರಜನಿ ಚಿಕ್ಕಯ್ಯಮಠ ವಿದ್ಯಾರ್ಥಿಗಳು ಈ ಹಣವನ್ನು ಸದುಪಯೋಗ ಪಡೆದುಕೊಳ್ಳಬೇಕು ಮಾತ್ರವಲ್ಲ ಮುಂದೆ ಇದೇ ರೀತಿಯ ಸಮಾಜಮುಖಿ ಕಾರ್ಯಗಳ ಮೂಲಕ ಈ ಹಣದ ಋಣತೀರಿಸುವ ಕೆಲಸ ಮಾಡಬೇಕೆಂದು ಕಿವಿಮಾತು ಹೇಳಿದರು.   ಕಾಲೇಜಿನ ಪ್ರಿನ್ಸಿಪಾಲ್  ಯೂಸುಫ್ ವಿಟ್ಲ  ಕಾಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅಭಿವೃದ್ಧಿ ಸಮಿತಿ ಸದಸ್ಯೆ ಸುಜಾತ,  ಉಪನ್ಯಾಸಕರಾದ ಲಕ್ಷೀ ಆಚಾರ್ಯ, ಸಾಝಿಯಾ ಉಪಸ್ಥಿತರಿದ್ದರು.  ಆಂಗ್ಲ ಭಾಷಾ ಉಪನ್ಯಾಸಕ ದಾಮೋದರ ರಾಮಕುಂಜ ಸ್ವಾಗತಿಸಿದರು. ಅರ್ಥಶಾಸ್ತ್ರ ಉಪನ್ಯಾಸಕ ಬಾಲಕೃಷ್ಣ ನಾಯ್ಕ್ ವಂದಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ