ಮಾಣಿಯಲ್ಲಿ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಅವರಿಗೆ ಸನ್ಮಾನ

ಬಂಟ್ವಾಳ: ಮಾಣಿ ಶ್ರೀ ಉಳ್ಳಾಲ್ತಿ ಯಕ್ಷಗಾನ ಬಯಲಾಟ ಸಮಿತಿ ಮತ್ತು ಯಕ್ಷಗಾನ ಸಮಿತಿ ಸಂಯುಕ್ತ ಆಶ್ರಯದಲ್ಲಿ, ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಬಯಲು ರಂಗಮಂದಿರದಲ್ಲಿ, ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ಪ್ರತಿಷ್ಠಾ ದಿನಾಚರಣೆ ಸಲುವಾಗಿ, ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ, ಪಾವಂಜೆ ಇವರಿಂದ ಯಕ್ಷಗಾನ ಬಯಲಾಟ ಗಜೇಂದ್ರ ಮೋಕ್ಷ-ಸುದರ್ಶನ ಗರ್ವಭಂಗ-ಭಾರ್ಗವ ವಿಜಯ ಪ್ರಸಂಗಗಳೊಂದಿಗೆ ನಡೆಯಿತು. ಈ ಸಂದರ್ಭದಲ್ಲಿ ಭಾಗವತರಾದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ಆಡಳಿತ ಮೊಕ್ತೇಸರರಾದ ಸಚಿನ್ ರೈ ಮಾಣಿಗುತ್ತು, ಕಾರ್ಯಕ್ರಮದ ಪ್ರಾಯೋಜಕರು ವಕೀಲರಾದ ಕಲ್ಲಂಗಳಗುತ್ತು ರಾಜೇಶ್ ರೈ, ಸುಧಾಕರ ಪೈ ಮಾಣಿ ಉಪಸ್ಥಿತರಿದ್ದರು. ಯಕ್ಷಗಾನ ಸಮಿತಿಯ ಅಧ್ಯಕ್ಷರಾದ ಮೋಹನ್ ಪೈ ಸ್ವಾಗತಿಸಿದರು. ಕಾರ್ಯದರ್ಶಿ ಬಾಲಕೃಷ್ಣ ಆಳ್ವ, ಕೊಡಾಜೆ ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು

About the Author

Bantwal News
2016 ನವೆಂಬರ್ 10ರಂದು ಆರಂಭಗೊಂಡ ಬಂಟ್ವಾಳದ ಮೊದಲ ವೆಬ್ ಪತ್ರಿಕೆ ಇದು. 25 ಲಕ್ಷಕ್ಕಿಂತಲೂ ಅಧಿಕ ಮಂದಿ ಕೇವಲ 45 ತಿಂಗಳಲ್ಲೇ ಓದಿದ ಜಾಲತಾಣವಿದು. ಸಂಪಾದಕ: ಹರೀಶ ಮಾಂಬಾಡಿ. ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಅವಸರದ ಸುದ್ದಿ ಕೊಡದೆ, ಮಾಹಿತಿ ಖಚಿತಗೊಂಡ ಬಳಿಕವಷ್ಟೇ ಪ್ರಕಟಿಸಲಾಗುತ್ತದೆ. ಅತಿರಂಜಿತ ಸುದ್ದಿ ಇಲ್ಲಿಲ್ಲ. ಇದು www.bantwalnews.com ಧ್ಯೇಯ.

Be the first to comment on "ಮಾಣಿಯಲ್ಲಿ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಅವರಿಗೆ ಸನ್ಮಾನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*