ಬಂಟ್ವಾಳ: ಬಂಟ್ವಾಳ ಮಿನಿವಿಧಾನಸೌಧದಲ್ಲಿ ಜನರೇಟರ್ ಇದ್ದರೂ ಯಾವುದೇ ವ್ಯವಸ್ಥೆಗಳಿಲ್ಲದೆ ಸಮಸ್ಯೆ ಉಂಟಾಗುತ್ತಿತ್ತು. ಈಗ ಸೋಲಾರ್ ವ್ಯವಸ್ಥೆ ಅಳವಡಿಸಲಾಗಿದ್ದು, ವಿದ್ಯುತ್ ಕೊರತೆ ಸಮಸ್ಯೆ ಇರುವುದಿಲ್ಲ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು.
ಮಿನಿ ವಿಧಾನಸೌಧದಲ್ಲಿ ಸೋಲಾರ್ ವಿದ್ಯುತ್ ವ್ಯವಸ್ಥೆಯ ಸೌಕರ್ಯವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೆಲವೊಂದು ಸಣ್ಣಪುಟ್ಟ ತೊಂದರೆಗಳು ಇಲ್ಲಿದ್ದವು, ವಿದ್ಯುತ್ ಸಮರ್ಪಕ ಪೂರೈಕೆಯಾಗದೆ, ಜನರು ತೊಂದರೆ ಪಡುತ್ತಿರುವ ಕುರಿತು ದೂರುಗಳು ಬಂದ ಹಿನ್ನೆಲೆಯಲ್ಲಿ ಸೋಲಾರ್ ವ್ಯವಸ್ಥೆಯನ್ನು ಅಳವಡಿಸಲಾಗುತ್ತಿದೆ ಎಂದವರು ಹೇಳಿದರು. ಇನ್ನು ಜನರಿಗೆ ತೊಂದರೆಯಾಗದೆ ಕೆಲಸ ಕಾರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು, ಕರೆಂಟ್ ಇಲ್ಲ ಎಂಬ ದೂರುಗಳು ಇನ್ನು ಬಾರದು ಎಂದು ಶಾಸಕರು ಹೇಳಿದರು. ಉದ್ಘಾಟನೆ ಸಂದರ್ಭ ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಪುರಸಭಾಧ್ಯಕ್ಷ ಮಹಮ್ಮದ್ ಶರೀಫ್, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ, ಬುಡ ಅಧ್ಯಕ್ಷ ದೇವದಾಸ ಶೆಟ್ಟಿ, ತಹಸೀಲ್ದಾರ್ ರಶ್ಮಿ ಎಸ್.ಆರ್. ಸಹಿತ ಪ್ರಮುಖರು ಈ ಸಂದರ್ಭ ಉಪಸ್ಥಿತರಿದ್ದರು.
Be the first to comment on "ಬಂಟ್ವಾಳ ಮಿನಿ ವಿಧಾನಸೌಧಕ್ಕೆ ಸೌರವಿದ್ಯುತ್ – ಶಾಸಕ ರಾಜೇಶ್ ನಾಯ್ಕ್"