ಬಂಟ್ವಾಳ

ಕುಲಾಲ ಸುಧಾರಕ ಸಂಘದಿಂದ ಪ್ರತಿಭಾ ಪುರಸ್ಕಾರ

ಬಂಟ್ವಾಳ: ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ (ರಿ) ವತಿಯಿಂದ ಬಿ.ಸಿ.ರೋಡಿನ ಪೊಸಳ್ಳಿಯಲ್ಲಿರುವ ಕುಲಾಲ ಸಮುದಾಯ ಭವನದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿ ವೇತನ ಕಾರ್ಯಕ್ರಮ ನಡೆಯಿತು. ಸಂಘದ ಅಧ್ಯಕ್ಷರಾದ ಜಯಂತಿ ಗಂಗಾಧರ್ ಅಧ್ಯಕ್ಷತೆ ವಹಿಸಿದ್ದರು. ಸುಮಾರು 48 ವಿದ್ಯಾರ್ಥಿಗಳಿಗೆ  ವಿಧ್ಯಾರ್ಥಿ ವೇತನ, 18 ವಿಧ್ಯಾರ್ಥಿಗಳಿಗೆ ನಿರಂತರ ವಿಧ್ಯಾರ್ಥಿ ವೇತನ, 9 ವಿದ್ಯಾರ್ಥಿಗಳಿಗೆ  ಪ್ರತಿಭಾ ಪುರಸ್ಕಾರ ನೀಡಲಾಯಿತು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃಸಂಘ ಅಧ್ಯಕ್ಷ  ಮಯ್ಯೂರ್ ಉಳ್ಳಾಲ್, ಕೀಲು ಮತ್ತು ಎಲುಬು ತಜ್ಞ ವೈದ್ಯ ಡಾ. ಚೇತನ್ ರಾಜ್, ಪ್ರಮುಖರಾದ ಪುರಂದರ ಸಜಿಪ, ರಮೇಶ್ ಸಾಲಿಯಾನ್, ಸುಕುಮಾರ್ ಬಂಟ್ವಾಳ್, ನಮಿತಾ ಉಮೇಶ್, ನಿಶಾಂತ್ ಎಂ.ಬಿ ಭಾಗವಹಿಸಿದ್ದರು. ದಾಮೋದರ ಮಾಸ್ತರ್ ಸ್ವಾಗತಿಸಿದರು.  ಸುಕುಮಾರ್ ಬಂಟ್ವಾಳ ವಂದಿಸಿದರು. ರಾಧಾಕೃಷ್ಣ ಬಂಟ್ವಾಳ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ