ಬಂಟ್ವಾಳ: ಕಾರಂಬಡೆ ಶ್ರೀ ಮಹಮ್ಮಾಯಿ ಕ್ಷೇತ್ರದ ಪುನರ್ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು ಈಗಾಗಲೇ ದೇವಿಯ ಗರ್ಭಗುಡಿ, ಜುಮಾದಿ ಬಂಟ ದೈವದ ಗುಡಿ, ನಾಗ ದೇವರ ಪಂಚಸಾನಿಧ್ಯ ಸಹಿತ ಹಲವಾರು ಅಭಿವೃದ್ಧಿ ಯೋಜನೆಗಳು ಅನುಷ್ಠಾನಗೊಂಡಿದೆ. ಬ್ರಹ್ಮಕಲಶೋತ್ಸವಕ್ಕೆ ದಿನ ನಿಗದಿಯಾಗಿದ್ದು ಈ ಕುರಿತು ಸಮಾಲೋಚನಾ ಸಭೆ ಜ.31ರಂದು ಭಾನುವಾರ ಬೆಳಿಗ್ಗೆ 9.30ಕ್ಕೆ ಕನ್ಯಾಡಿ ಶ್ರೀರಾಮ ಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ನಡೆಯಲಿದೆ. ಈ ಸಭೆಗೆ ಊರ ಪರವೂರ ಹಲವಾರು ಗಣ್ಯರು ಭಾಗವಹಿಸಲಿದ್ದು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರಕಟಣೆ ತಿಳಿಸಿದೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಜ.31ರಂದು ಕಾರಂಬಡೆ ಕ್ಷೇತ್ರ ಬ್ರಹ್ಮಕಲಶೋತ್ಸವ ಪೂರ್ವಭಾವಿ ಸಭೆ"