ಬಂಟ್ವಾಳ

ಪಲ್ಸ್ ಪೊಲಿಯೊ ಅಭಿಯಾನ – 31ರಂದು ಬಂಟ್ವಾಳ ತಾಲೂಕಿನ ಹಲವೆಡೆ ಕಾರ್ಯಕ್ರಮ

ಬಂಟ್ವಾಳ: ತಾಲೂಕಿನಲ್ಲಿ ಜನವರಿ 31ರಂದು ನವಜಾತ ಶಿಶುವಿನಿಂದ ಐದು ವರ್ಷ ಒಳಗಿನ ಎಲ್ಲಾ ಮಕ್ಕಳಿಗೂ ಪೋಲಿಯೋ ಲಸಿಕೆ ಹಾಕಿಸಿಕೊಳ್ಳುವ ಸಿದ್ಧತೆ ಆರೋಗ್ಯ ಇಲಾಖೆಯಿಂದ ನಡೆದಿದೆ ಎಂದು ತಾಲೂಕು ವೈದ್ಯಾಧಿಕಾರಿ ಡಾ. ದೀಪಾ ಪ್ರಭು ತಿಳಿಸಿದ್ದಾರೆ.

ತಾಲೂಕಿನಲ್ಲಿ ಒಟ್ಟು 30,352 ಮಕ್ಕಳಿಗೆ ಲಸಿಕೆ ಹಾಕಲು 190 ಬೂತ್ ಗಳನ್ನು ಸಿದ್ಧತೆ ಮಾಡಲಾಗಿದ್ದು ಸಿಬ್ಬಂದಿಯನ್ನು ನೇಮಿಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಯಾಣ ಬೆಳೆಸುವ ಸಾರ್ವಜನಿಕರಿಗೆ ಮತ್ತಷ್ಟು ಸಹಕಾರ ಆಗುವಂತೆ ಪುದು, ಬಿ.ಸಿ.ರೋಡ್ ಸರಕಾರಿ ಮತ್ತು ಖಾಸಗಿ, ವಿಟ್ಲ ಸರಕಾರಿ ಮತ್ತು ಖಾಸಗಿ, ಕುರ್ನಾಡು ಬಸ್ ನಿಲ್ದಾಣಗಳಲ್ಲಿ ಒಟ್ಟು 6 ಟ್ರಾನ್ಸಿಟ್ ಬೂತ್ ಗಳನ್ನು ಸ್ಥಾಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ತಮ್ಮ ಮಕ್ಕಳಿಗೆ ಜನವರಿ 31ರಂದು ಪೋಲಿಯೊ ಲಸಿಕೆ ಹಾಕಿಸುವ ಮೂಲಕ ಆರೋಗ್ಯ ಇಲಾಖೆಯೊಂದಿಗೆ ಸಾರ್ವಜನಿಕರು ಸಹಕಾರ ನೀಡುವಂತೆ ಡಾ. ದೀಪಾ ಪ್ರಭು ಮನವಿ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ