ಬಂಟ್ವಾಳ: ವಿವಿಧ ಸಾಮಾಜಿಕ, ಆರೋಗ್ಯ, ಸಾಂಸ್ಕೃತಿಕ, ಕ್ರೀಡಾ ಕ್ಷೇತ್ರಗಳಲ್ಲಿ ವಿವಿಧ ಕಾರ್ಯಕ್ರಮಗಳ ಮೂಲಕ ಸಮಾಜ ಸೇವೆಗೈಯುತ್ತಿದ್ದು 37ನೇ ವರ್ಷದಲ್ಲಿ ಮುನ್ನಡೆಯುತ್ತಿರುವ ಪುಂಜಾಲಕಟ್ಟೆಯ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ 13ನೇ ವರ್ಷದ ಸಾಮೂಹಿಕ ವಿವಾಹದ ಸಿದ್ಧತೆಯಲ್ಲಿದ್ದು, ಅರ್ಹ ವಧು-ವರರ ನೊಂದಾವಣೆಗೆ ಅರ್ಜಿ ಆಹ್ವಾನಿಸಲಾಗಿದೆ.
ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ಎ.25ರಂದು ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದ್ದು ವಧು-ವರರ ನೊಂದಾವಣೆಗೆ ಫೆ. 28 ಕೊನೆಯ ದಿನಾಂಕವಾಗಿದೆ.
ಆಸಕ್ತ ವಧು-ವರರು ಸೂಕ್ತ ದಾಖಲೆ ಪತ್ರಗಳೊಂದಿಗೆ ಕ್ಲಬ್‌ನ ಕಛೇರಿಯಲ್ಲಿ ಸಂಪರ್ಕಿಸಬಹುದು. ವಿವಾಹವಾಗುವ ವಧುವಿಗೆ ಚಿನ್ನದ ತಾಳಿ ಹಾಗೂ ವಧು-ವರರಿಗೆ ಮಂಗಳ ವಸ್ತ್ರ ನೀಡಲಾಗುವುದು. ಹಾಗೂ ಸರಕಾರದ ವತಿಯಿಂದ ಪ್ರತೀ ಜೋಡಿಯ ಖಾತೆಗೆ 50 ಸಾವಿರ ರೂ. ನೀಡಲಾಗುವುದು. ಅನಾಥ, ಬಡ ಕುಟುಂಬದವರಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಎ.25 ರಂದು ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ಸಾಮೂಹಿಕ ವಿವಾಹ ನಡೆಯಲಿದೆ ಎಂದು ಕ್ಲಬ್ ಸ್ಥಾಪಕಾಧ್ಯಕ್ಷ ಎಂ. ತುಂಗಪ್ಪ ಬಂಗೇರ ಮತ್ತು ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.