ಕಲ್ಲಡ್ಕ

ಕಲ್ಲಡ್ಕ ಸಮೀಪ ಅಪಘಾತ: ಖಾಲಿ ಗ್ಯಾಸ್ ಟ್ಯಾಂಕರ್, ಕಂಟೈನರ್ ಡಿಕ್ಕಿ

ಬಂಟ್ವಾಳ: ಸೂರಿಕುಮೇರುವಿನಲ್ಲಿ ಮಂಗಳವಾರ ಬೆಳಗ್ಗೆ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಸುಮಾರು 10 ಗಂಟೆ ವಾಹನ ಸಂಚಾರ ಅಡಚಣೆಯ ಸಮಸ್ಯೆಯ ಬೆನ್ನಲ್ಲೇ ಕಲ್ಲಡ್ಕದಲ್ಲಿ ಬುಧವಾರ ರಾತ್ರಿ ಮತ್ತೊಂದು ಅಪಘಾತ ಸಂಭವಿಸಿದೆ.

ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ಖಾಲಿಯಾಗಿರುವ ಅನಿಲ ಟ್ಯಾಂಕರ್ ಮತ್ತು ಕಂಟೈನರ್ ನಡುವೆ ಅಪಘಾತ ಸಂಭವಿಸಿದೆ.

ಪರಿಣಾಮ ಕೆಲ ಕಾಲ ಆತಂಕದ ವಾತಾವರಣ ಬುಧವಾರ ರಾತ್ರಿ ನಿರ್ಮಾಣವಾಯಿತು. ಬೆಂಗಳೂರು ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಖಾಲಿ ಗ್ಯಾಸ್ ಟ್ಯಾಂಕರ್ ಮತ್ತು ಬೆಂಗಳೂರು ಕಡೆ ಹೋಗುತ್ತಿದ್ದ ಕಂಟೈನರ್ ನಡುವೆ ಅಪಘಾತ ಸಂಭವಿಸಿದೆ. ಆದರೆ ಗ್ಯಾಸ್ ಟ್ಯಾಂಕರ್ ಖಾಲಿ ಇದ್ದ ಕಾರಣ ಯಾವುದೇ ಅಪಾಯ ಎದುರಾಗಿಲ್ಲ. ಕಲ್ಲಡ್ಕ ಪೂರ್ಲಿಪ್ಪಾಡಿಯಲ್ಲಿ ಬುಧವಾರ ರಾತ್ರಿ ಸುಮಾರು8ರಿಂದ 9 ಗಂಟೆ ವೇಳೆಗೆ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಯಾರಿಗೂ ಗಾಯಗಳುಂಟಾಗಿಲ್ಲ ಹಾಗೂ ವಾಹನ ಸಂಚಾರಕ್ಕೆ ಅಡಚಣೆ ಆಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಠಾಣಾ ಎಸ್.ಐ. ರಾಜೇಶ್ ಕೆ.ವಿ. ಮತ್ತು ಸಿಬ್ಬಂದಿ ಆಗಮಿಸಿ ಸುಗಮ ವಾಹನ ಸಂಚಾರಕ್ಕೆ ಅನುಕೂಲ ಕಲ್ಪಿಸಿದರು. ಬುಧವಾರ ಸಂಜೆಯಷ್ಟೇ ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಅವರು ಗ್ಯಾಸ್ ಟ್ಯಾಂಕರ್ ವಾಹನ ಚಾಲಕರ ಸುರಕ್ಷಿತ ಚಾಲನೆ ಕುರಿತು ಕಟ್ಟುನಿಟ್ಟಿನ ಕ್ರಮ ಹಾಗೂ ರಾತ್ರಿ ಸಂಚಾರದ ನಿರ್ಬಂಧಗಳ ಕುರಿತು ಚರ್ಚಿಸಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ