ಜಿಲ್ಲಾ ಸುದ್ದಿ

ಅನಿಲ ಟ್ಯಾಂಕರ್ ಗಳ ಅಸುರಕ್ಷಿತ ಚಾಲನೆಗೆ ಕಡಿವಾಣ – ಅಧಿಕಾರಿಗಳಿಗೆ ದ.ಕ.ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

ಹೆದ್ದಾರಿಗಳಲ್ಲಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಗ್ಯಾಸ್ ಟ್ಯಾಂಕರ್‍ಗಳ ಅಸುರಕ್ಷಿತ ಚಾಲನೆಯಿಂದ ತೊಂದರೆಯಾಗುತ್ತಿದೆ, ಇವುಗಳಿಗೆ ಕಡಿವಾಣ ಹಾಕಲು ಅಧಿಕಾರಿಗಳು ಮುಂದಾಗಬೇಕೆಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬುಧವಾರ ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ವಿವಿಧ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಅನಿಲ ಟ್ಯಾಂಕರ್‍ಗಳ ಅಪಘಾತದಿಂದಾಗಿ ಹೆಚ್ಚಿನ ಅನಾಹುತಗಳಾಗುವ ಸಾಧ್ಯತೆ ಇರುವ ಹಿನ್ನೆಲೆ ಅವುಗಳ ಸಾಗಾಣಿಕೆಗೆ ನಿಗಧಿ ಪಡಿಸಿರುವ ಸಮಯದಲ್ಲಿ ಮಾತ್ರ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ತಪ್ಪಿದಲ್ಲಿ ಅಂಥ ಲಾರಿಗಳಿಗೆ ದಂಡ ವಿಧಿಸಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಲಕ್ಷ್ಮೀಪ್ರಸಾದ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅನಿಲ ಟ್ಯಾಂಕರ್‍ಗಳ ಅಪಘಾತದಿಂದ ಜಿಲ್ಲೆಯಲ್ಲಿ ರಸ್ತೆಗಳು 10 ಗಂಟೆಗಳಿಗೂ ಹೆಚ್ಚು ಕಾಲ ರಸ್ತೆಗಳು ಬಂದ್ ಆಗಿ, ವಾಹನಗಳ ಸಂಚಾರಕ್ಕೆ ಅಡ್ಡಿಯಾಗುತ್ತಿದೆ ಎಂದ ಅವರು, ಅಪಘಾತವಾದ ಸಂದರ್ಭದಲ್ಲಿ ಅವುಗಳ ನಿರ್ವಹಣೆಗೆ ಗ್ಯಾಸ್ ಕಂಪನಿಯ ಅಧಿಕಾರಿಗಳು ಶೀಘ್ರದಲ್ಲಿಯೇ ಸ್ಪಂದಿಸಬೇಕೆಂಬ ಸೂಚನೆ ನೀಡಿದರು.
ಟ್ಯಾಂಕರ್ ವಾಹನಗಳ ಚಾಲನೆಗೆ ಎರಡು ಜನ ಚಾಲಕರನ್ನು ಕಡ್ಡಾಯವಾಗಿ ನೇಮಕ ಮಾಡಿಕೊಳ್ಳಬೇಕು. ರಾತ್ರಿ 10 ರಿಂದ ಬೆಳಿಗ್ಗೆ 6 ರವರೆಗೆ ಈ ವಾಹನಗಳ ಚಾಲನೆಗೆ ಅವಕಾಶ ಮಾಡಿಕೊಡದಂತೆ ಗ್ಯಾಸ್ ಕಂಪನಿಯವರು ಕಾರ್ಯಪ್ರವೃತ್ತರಾಗಬೇಕು ಎಂದರು. ಗ್ಯಾಸ್ ಕಂಪೆನಿಗಳು ವಾಹನಗಳಿಗೆ ಗ್ಯಾಸ್ ತುಂಬುವ ಬದಲಿ ವ್ಯವಸ್ಥೆಗಳನ್ನು ಬೇರೆ ಕಡೆಗಳಲ್ಲಿ ಮಾಡಿಕೊಂಡು ಜಿಲ್ಲಾ ಗ್ಯಾಸ್ ಜಿಲ್ಲಾ ಗ್ಯಾಸ್ ಟ್ಯಾಂಕರ್‍ಗಳ ದಟ್ಟಣೆಯನ್ನು ಕಡಿಮೆ ಮಾಡಬೇಕು. ತಪ್ಪಿದಲ್ಲಿ, ಜಿಲ್ಲೆಯಲ್ಲಿ ಟ್ಯಾಂಕರ್ ವಾಹನಗಳ ಸಂಚಾರಕ್ಕೆ ಪೂರ್ಣ ಪ್ರಮಾಣದಲ್ಲಿ ನಿಲ್ಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಅಪಘಾತವಾದ ತುರ್ತು ಸಂದರ್ಭದಲ್ಲಿ ಸ್ಪಂಧಿಸಲು ತಂಡವನ್ನು ರಚಿಸುವುದರೊಂದಿಗೆ ಅವಘಡಗಳಿಗೆ ಶೀಘ್ರದಲ್ಲಿಯೇ ಸ್ಪಂದಿಸಿ ಇತರೆ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲು ಮುಂದಾಗಬೇಕು, ಎಂದ ಅವರು ರಾಷ್ಟ್ರೀಯ ಹೆದ್ದಾರಿ ರಸ್ತೆ ಪ್ರಾಧಿಕಾರದವರು ರಸ್ತೆಗಳ ಎರಡು ಬದಿಯಲ್ಲಿ ಸಮತಟ್ಟಾಗಿ ಇರುವಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿ ಪ್ರಸಾದ್, ಮಹಾನಗರ ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀಧರ್, ಐಎಎಸ್ ಪ್ರೊಬೆಷನರಿ ಅಧಿಕಾರಿ ಮೋನ್ಹಾ ರೋತ್, ಅಪರ ಜಿಲ್ಲಾಧಿಕಾರಿ ಎಮ್. ಜೆ. ರೂಪ, ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತ ವಿಜಯ್‍ಕುಮಾರ್ ಪೂಜಾರ್, ಕಾರ್ಖಾನೆ ಮತ್ತು ಬಾಯ್ಲರ್ ಇಲಾಖೆ ಉಪನಿರ್ದೇಶಕ ರಾಜೇಶ್ ಮಿಶ್ರಾ ಕೋಟಿ, ಐ.ಒ.ಸಿ, ಬಿ.ಪಿ.ಸಿ.ಎಲ್, ಟೋಟಲ್ ಗ್ಯಾಸ್ ಕಂಪೆನಿಯ ಸುರಕ್ಷತಾ ಅಧಿಕಾರಿಗಳು ಹಾಗೂ ವಿವಿಧ ಮತ್ತಿತರರು ಉಪಸ್ಥಿತರಿದ್ದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ