


ಬಂಟ್ವಾಳ: 400 ಕೆವಿ ಉಡುಪಿ ಕಾಸರಗೋಡು ವಿದ್ಯುತ್ ಪ್ರಸರಣಾ ಮಾರ್ಗದ ಆತಂಕಿತ ಸಂತ್ರಸ್ತರ ಸಭೆ ಬಂಟ್ವಾಳ ತಾಲೂಕಿನ ಲೊರೆಟ್ಟೊ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಭಾನುವಾರ ಫೆ.7ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರುಸೇನೆ ನೇತೃತ್ವದಲ್ಲಿ ಸಂತ್ರಸ್ತರ ಹೋರಾಟ ಸಮಿತಿ ಆಶ್ರಯದಲ್ಲಿ ಸಭೆ ನಡೆಯಲಿದೆ ಎಂದು ರೈತಸಂಘದ ಜಿಲ್ಲಾಧ್ಯಕ್ಷ ಓಸ್ವಾಲ್ಡ್ ಫೆರ್ನಾಂಡೀಸ್ ತಿಳಿಸಿದ್ದು, ಹಿರಿಯ ಮುಖಂಡರು ಆಗಮಿಸಿ ಮಾರ್ಗದರ್ಶನ ನೀಡಲಿದ್ದಾರೆ, ಹೋರಾಟದ ಕುರಿತು ರೂಪುರೇಷೆಗಳ ಕುರಿತು ಸಭೆಯಲ್ಲಿ ನಿರ್ಧರಿಸಲಾಗುವುದು ಎಂದಿದ್ದಾರೆ.



Be the first to comment on "ಲೊರೆಟ್ಟೊದಲ್ಲಿ ಆತಂಕಿತ ರೈತರ, ಸಂತ್ರಸ್ತರ ಸಭೆ ನಾಳೆ"