ಬಂಟ್ವಾಳ: ಕೇಂದ್ರ ಸರ್ಕಾರ ಪೆಟ್ರೋಲ್ , ಡಿಸೇಲ್ ಹಾಗೂ ಅಡುಗೆ ಅನಿಲದ ಬೆಲೆಯೇರಿಕೆ ಮಾಡಿರುವುದನ್ನು ಖಂಡಿಸಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ ( ಡಿವೈಎಫ್ಐ ) ಬಂಟ್ವಾಳ ತಾಲೂಕು ಸಮಿತಿ ನೇತೃತ್ವದಲ್ಲಿ ಬಿ.ಸಿ ರೋಡ್ ಜಂಕ್ಷನ್ ನಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಡಿವೈಎಫ್ಐ ಜಿಲ್ಲಾ ಮುಖಂಡರಾದ ಅಶ್ರಪ್ ಕೆ.ಸಿ.ರೋಡ್ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಕುಸಿಯುತ್ತಿದ್ದರೂ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬೆಲೆಯನ್ನು ಏರಿಸುತ್ತಲೇ ಇದೆ. ಭಾರತದ ಮೂಲಕ ತೈಲ ತರಿಸಿಕೊಳ್ಳುತ್ತಿರುವ ಶ್ರೀಲಂಕಾ, ನೇಪಾಳದಲ್ಲಿ ಅಲ್ಲಿನ ಸರ್ಕಾರ ಕಡಿಮೆ ಬೆಲೆಗೆ ಗ್ರಾಹಕರಿಗೆ ತೈಲ ಪೂರೈಸುತ್ತಿದೆ. ಆದರೆ ಇಲ್ಲಿ ಸರ್ಕಾರ ತೈಲ ಬೆಲೆ ಏರಿಸಿ ಖಾಸಗಿ ಕಂಪೆನಿಗಳಿಗೆ ಲಾಭ ಮಾಡಿಕೊಡುತ್ತಿದೆ ಎಂದು ಆರೋಪಿಸಿದರು.
ಪ್ರತಿಭಟನಾಕಾರನ್ನುದ್ದೇಶಿಸಿ ಕಾರ್ಮಿಕ ಮುಖಂಡರಾದ ರಾಮಣ್ಣ ವಿಟ್ಲ , ಮಾತನಾಡಿದರು. ಪ್ರತಿಭಟನೆಯಲ್ಲಿ ಡಿ.ವೈ.ಎಫ್.ಐ ತಾಲೂಕು ಸಮಿತಿ ಸಲಹೆಗಾರ ರಾದ ರಾಜ ಚೆಂಡ್ತಿಮಾರ್, ತಾಲೂಕು ಅಧ್ಯಕ್ಷರಾದ ಸುರೇಂದ್ರ ಕೋಟ್ಯಾನ್ ,ಕಾರ್ಯದರ್ಶಿ ನ್ಯಾಯವಾದಿ ತುಳಸೀದಾಸ್ ವಿಟ್ಲ, ಸಯ್ಯದ್ ರಿಯಾಜ್ ,ಮಹಮ್ಮದ್ ಗಝಾಲಿ,ಮಹಮ್ಮದ್ ಇಕ್ಬಾಲ್ ಹಳೆಮನೆ, ವಿಟ್ಲ ವಲಯ ಸಮಿತಿ ಅಧ್ಯಕ್ಷ ರಾದ ನುಜುಮ್ ಅಳಿಕೆ,ಇಸಾಕ್ ಕುಡ್ತಮುಗೇರು, ಸುಲೈಮಾನ್ ಪೆಲತ್ತಡ್ಕ, ಸಮೀರ್ ಪಾತ್ರತೋಟ, ಶೆರೀಪ್ ಪಾತ್ರತೋಟ ಲಿಯಾಕತ್ ಖಾನ್ ,ಜನಾರ್ಧನ ಕುಲಾಲ್, ಖಲೀಲ್ ಬಾಪು, ಟೂರಿಸ್ಟ್ ವಾಹನ ಚಾಲಕರ ಸಂಘದ ಅಧ್ಯಕ್ಷ ರಾದ ಗುಣಕರ್ ಮುಂತಾದವರು ಭಾಗವಹಿಸಿದ್ದರು.