ಬಂಟ್ವಾಳ: ಗೋಳ್ತಮಜಲು ಗ್ರಾ.ಪಂ.ವ್ಯಾಪ್ತಿಯ ಅಮ್ಟೂರು ಕೇಶವನಗರ ಅಂಗನವಾಡಿ ಕೇಂದ್ರಕ್ಕೆ ಲೋಕೋಪಯೋಗಿ ಇಲಾಖೆಯ ಮೂಲಕ 16 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಕಟ್ಟಡಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಶಿಲಾನ್ಯಾಸ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ಅಂಗನವಾಡಿ ಕೇಂದ್ರಗಳು ಮಕ್ಕಳಿಗೆ ಸಂಸ್ಕೃತಿ, ಸಂಸ್ಕಾರವನ್ನು ಕಲಿಸುವ ಕೆಲಸ ಮಾಡುತ್ತವೆ. ಅಂಗನವಾಡಿ ಕೇಂದ್ರವನ್ನು ಸರಕಾರಿ ಶಾಲೆಗಳ ಆವರಣದಲ್ಲೇ ಮಾಡಬೇಕೆಂಬ ಬೇಡಿಕೆ ಇದ್ದರೂ, ಗ್ರಾಮ ಗ್ರಾಮಗಳಿಂದ ಅಂಗನವಾಡಿ ಬೇಡಿಕೆ ಬಂದಾಗ ಸರಕಾರಿ ಶಾಲೆಗಳ ಆವರಣದಲ್ಲಿ ನಿರ್ಮಿಸುವುದು ಕಷ್ಟವಾಗಿದೆ ಎಂದರು.
ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ಜಿ.ಪಂ.ಸದಸ್ಯೆ ಕಮಲಾಕ್ಷಿ ಪೂಜಾರಿ, ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ, ಸದಸ್ಯ ಮಹಾಬಲ ಆಳ್ವ, ಗ್ರಾ.ಪಂ.ಸದಸ್ಯರಾದ ಎಲಿಯಾಸ್ ಡಿಸೋಜ, ಸುಷ್ಮಾ, ಲಕ್ಷ್ಮೀ ಪ್ರಭು, ಪ್ರೇಮ, ಜಯಂತ ಗೌಡ, ಪವಿತ್ರ, ಗೋಪಾಲಕೃಷ್ಣ, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರಮುಖರಾದ ತಾಪಂ ಮಾಜಿ ಉಪಾಧ್ಯಕ್ಷ ದಿನೇಶ್ ಅಮ್ಟೂರು, ಪದ್ಮನಾಭ ಶೆಟ್ಟಿ, ಚಿದಾನಂದ ರೈ ಕಕ್ಯ, ಪುರುಷೋತ್ತಮ ಶೆಟ್ಟಿ ವಾಮದಪದವು, ರಮನಾಥ ರಾಯಿ, ಲೋಕೋಪಯೋಗಿ ಇಲಾಖೆ ಎಇಇ ಷಣ್ಮುಗಂ, ಸಹಾಯಕ ಎಂಜಿನಿಯರ್‌ಗಳಾದ ಅಮೃತ್‌ಕುಮಾರ್, ಪ್ರೀತಂ, ಹಿರಿಯ ಮೇಲ್ವಿಚಾರಕಿ ಭಾರತಿ ಕುಂದರ್ ಮೊದಲಾದವರು ಉಪಸ್ಥಿತರಿದ್ದರು. ಬಂಟ್ವಾಳ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗಾಯತ್ರಿ ಕಂಬಳಿ ಸ್ವಾಗತಿಸಿದರು. ಅಂಗನವಾಡಿ ಕಾರ್ಯಕರ್ತೆ ಶೋಭಾ ಕಾರ್ಯಕ್ರಮ ನಿರ್ವಹಿಸಿದರು.
Be the first to comment on "ಅಮ್ಟೂರು ಕೇಶವನಗರ ಅಂಗನವಾಡಿ ಕೇಂದ್ರಕ್ಕೆ ಶಿಲಾನ್ಯಾಸ"