ಅಮ್ಟೂರು ಕೃಷ್ಣಾಪುರದಲ್ಲಿ 1 ಕೋಟಿ ರೂ ವೆಚ್ಚದ ಕಿಂಡಿ ಅಣೆಕಟ್ಟು ಉದ್ಘಾಟನೆ

ಬಂಟ್ವಾಳ: ಸುಮಾರು 1 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಂಡ ಬಂಟ್ವಾಳ ತಾಲೂಕಿನ ಅಮ್ಟೂರು ಗ್ರಾಮದ ಕೃಷ್ಣಾಪುರದಲ್ಲಿ ಕಿಂಡಿ ಅಣೆಕಟ್ಟು ಕಿರುಸೇತುವೆಯನ್ನು ಬಂಟ್ವಾಳ ಶಾಸಕ ಉಳಿಪ್ಪಾಡಿಗುತ್ತು ರಾಜೇಶ್ ನಾಯ್ಕ್ ಉದ್ಘಾಟಿಸಿದರು.

ಕಿಂಡಿ ಅಣೆಕಟ್ಟುಗಳಿಂದ ಅಂತರ್ಜಲವೃದ್ಧಿ ಜೊತೆಗೆ ಕೃಷಿಕರಿಗೆ ಅನುಕೂಲವಾಗಿದೆ. ಎರಡು ಉದ್ದೇಶದಿಂದ ನಿರ್ಮಾಣಗೊಂಡಿರುವ ಇದರ ಎರಡೂ ಭಾಗಗಳಲ್ಲಿ ಮುಂದಿನ ದಿನಗಳಲ್ಲಿ ರಸ್ತೆ ನಿರ್ಮಿಸುವ ಕುರಿತು ಭರವಸೆ ನೀಡಿದರು.

ಮಾಜಿ ಶಾಸಕ ಕೆ. ಪದ್ಮನಾಭ ಕೊಟ್ಟಾರಿ, ಬಂಟ್ವಾಳ ತಾಪಂ ಮಾಜಿ ಉಪಾಧ್ಯಕ್ಷ, ಬಿಜೆಪಿ ಮುಖಂಡ ದಿನೇಶ್ ಅಮ್ಟೂರು, ಸ್ಥಳೀಯ ಬಿಜೆಪಿ ಅಧ್ಯಕ್ಷ ಪ್ರಭಾಕರ ಶೆಟ್ಟಿ, ಗ್ರಾ.ಪಂ.ಸದಸ್ಯರಾದ ಎಲಿಯಾಸ್ ಡಿಸೋಜ, ಪ್ರೇಮಾ, ಪವಿತ್ರಾ, ಜಯಂತ, ಗೋಪಾಲಕೃಷ್ಣ ಪೂವಳ ಪ್ರಮುಖರಾದ ರಮನಾಥ ರಾಯಿ, ಪುರುಷೋತ್ತಮ ಶೆಟ್ಟಿ ವಾಮದಪದವು, ದೇವದಾಸ್ ಕೃಷ್ಣಾಪುರ, ಪರಮೇಶ್ವರ, ಗೋಪಾಲ ಪೂಜಾರಿ, ಜಾನ್ ಡಿಸೋಜಾ, ಚಂದು ಕೃಷ್ಣಾಪುರ ಸಣ್ಣ ನೀರಾವರಿ ಇಲಾಖೆಯ ಸಹಾಯಕ ಎಂಜಿನಿಯರ್ ಶಿವಪ್ರಸನ್ನ, ಗುತ್ತಿಗೆದಾರ ಪ್ರಭಾಕರ ಹೆಗ್ಡೆ, ಮೊದಲಾದವರು ಉಪಸ್ಥಿತರಿದ್ದರು. ಬಂಟ್ವಾಳ ತಾ.ಪಂ.ಮಾಜಿ ಉಪಾಧ್ಯಕ್ಷ ದಿನೇಶ್ ಅಮ್ಟೂರು ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿ, ವಂದಿಸಿದರು.  ಶ್ರೀಕೃಷ್ಣ ಭಜನಾ ಮಂದಿರ ಕೃಷ್ಣಾಪುರದ ಅಧ್ಯಕ್ಷ ಚಂದು ಕೃಷ್ಣಾಪುರ ಶಾಸಕರನ್ನು ಶಾಲು ಹಾಕಿ ಸ್ವಾಗತಿಸಿದರು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಅಮ್ಟೂರು ಕೃಷ್ಣಾಪುರದಲ್ಲಿ 1 ಕೋಟಿ ರೂ ವೆಚ್ಚದ ಕಿಂಡಿ ಅಣೆಕಟ್ಟು ಉದ್ಘಾಟನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*