ಬಂಟ್ವಾಳ: ಸುಮಾರು 1 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಂಡ ಬಂಟ್ವಾಳ ತಾಲೂಕಿನ ಅಮ್ಟೂರು ಗ್ರಾಮದ ಕೃಷ್ಣಾಪುರದಲ್ಲಿ ಕಿಂಡಿ ಅಣೆಕಟ್ಟು ಕಿರುಸೇತುವೆಯನ್ನು ಬಂಟ್ವಾಳ ಶಾಸಕ ಉಳಿಪ್ಪಾಡಿಗುತ್ತು ರಾಜೇಶ್ ನಾಯ್ಕ್ ಉದ್ಘಾಟಿಸಿದರು.
ಕಿಂಡಿ ಅಣೆಕಟ್ಟುಗಳಿಂದ ಅಂತರ್ಜಲವೃದ್ಧಿ ಜೊತೆಗೆ ಕೃಷಿಕರಿಗೆ ಅನುಕೂಲವಾಗಿದೆ. ಎರಡು ಉದ್ದೇಶದಿಂದ ನಿರ್ಮಾಣಗೊಂಡಿರುವ ಇದರ ಎರಡೂ ಭಾಗಗಳಲ್ಲಿ ಮುಂದಿನ ದಿನಗಳಲ್ಲಿ ರಸ್ತೆ ನಿರ್ಮಿಸುವ ಕುರಿತು ಭರವಸೆ ನೀಡಿದರು.
ಮಾಜಿ ಶಾಸಕ ಕೆ. ಪದ್ಮನಾಭ ಕೊಟ್ಟಾರಿ, ಬಂಟ್ವಾಳ ತಾಪಂ ಮಾಜಿ ಉಪಾಧ್ಯಕ್ಷ, ಬಿಜೆಪಿ ಮುಖಂಡ ದಿನೇಶ್ ಅಮ್ಟೂರು, ಸ್ಥಳೀಯ ಬಿಜೆಪಿ ಅಧ್ಯಕ್ಷ ಪ್ರಭಾಕರ ಶೆಟ್ಟಿ, ಗ್ರಾ.ಪಂ.ಸದಸ್ಯರಾದ ಎಲಿಯಾಸ್ ಡಿಸೋಜ, ಪ್ರೇಮಾ, ಪವಿತ್ರಾ, ಜಯಂತ, ಗೋಪಾಲಕೃಷ್ಣ ಪೂವಳ ಪ್ರಮುಖರಾದ ರಮನಾಥ ರಾಯಿ, ಪುರುಷೋತ್ತಮ ಶೆಟ್ಟಿ ವಾಮದಪದವು, ದೇವದಾಸ್ ಕೃಷ್ಣಾಪುರ, ಪರಮೇಶ್ವರ, ಗೋಪಾಲ ಪೂಜಾರಿ, ಜಾನ್ ಡಿಸೋಜಾ, ಚಂದು ಕೃಷ್ಣಾಪುರ ಸಣ್ಣ ನೀರಾವರಿ ಇಲಾಖೆಯ ಸಹಾಯಕ ಎಂಜಿನಿಯರ್ ಶಿವಪ್ರಸನ್ನ, ಗುತ್ತಿಗೆದಾರ ಪ್ರಭಾಕರ ಹೆಗ್ಡೆ, ಮೊದಲಾದವರು ಉಪಸ್ಥಿತರಿದ್ದರು. ಬಂಟ್ವಾಳ ತಾ.ಪಂ.ಮಾಜಿ ಉಪಾಧ್ಯಕ್ಷ ದಿನೇಶ್ ಅಮ್ಟೂರು ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿ, ವಂದಿಸಿದರು. ಶ್ರೀಕೃಷ್ಣ ಭಜನಾ ಮಂದಿರ ಕೃಷ್ಣಾಪುರದ ಅಧ್ಯಕ್ಷ ಚಂದು ಕೃಷ್ಣಾಪುರ ಶಾಸಕರನ್ನು ಶಾಲು ಹಾಕಿ ಸ್ವಾಗತಿಸಿದರು.