ಬಂಟ್ವಾಳ: ಗೋಳ್ತಮಜಲು ಗ್ರಾ.ಪಂ.ವ್ಯಾಪ್ತಿಯ ಅಮ್ಟೂರು ಗ್ರಾಮದದಲ್ಲಿ 25 ಲಕ್ಷ ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಪುಂಜೋಳಿಮಾರುಗುತ್ತು-ಪಡ್ಡೆಮಜಲು ಕಾಂಕ್ರೀಟ್ ರಸ್ತೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಸೋಮವಾರ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಶಾಸಕ ರಾಜೇಶ್ ನಾಯ್ಕ್ ಅವರನ್ನು ಸನ್ಮಾನಿಸಲಾಯಿತು. ರಸ್ತೆಗೆ ಸ್ಥಳದಾನ ನೀಡಿದ ದಾನಿಗಳನ್ನು ಗೌರವಿಸಲಾಯಿತು. ಜತೆಗೆ ಗ್ರಾ.ಪಂ.ನ ಸ್ಥಳೀಯ ನೂತನ ಸದಸ್ಯರನ್ನು ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಜಿ.ಪಂ.ಸದಸ್ಯೆ ಕಮಲಾಕ್ಷಿ ಪೂಜಾರಿ, ತಾ.ಪಂ.ಸದಸ್ಯ ಮಹಾಬಲ ಆಳ್ವ, ಪ್ರಮುಖರಾದ ಮೋಹನರಾಜ ಚೌಟ ಪುಂಜೋಳಿಮಾರುಗುತ್ತು, ನಿರಂಜನ್ ಜೈನ್, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ, ತಾ.ಪಂ.ಮಾಜಿ ಉಪಾಧ್ಯಕ್ಷ ದಿನೇಶ್ ಅಮ್ಟೂರು, ಬಿಜೆಪಿ ಪ್ರಮುಖರಾದ ರಮನಾಥ ರಾಯಿ, ಪುರುಷೋತ್ತಮ ಶೆಟ್ಟಿ, ಚಿದಾನಂದ ರೈ, ಬೂತ್ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಬೈದರಡ್ಕ, ಶ್ರೀಧರ ಸುವರ್ಣ. ಗ್ರಾಪಂ ಸದಸ್ಯರಾದ ಗೋಪಾಲಕೃಷ್ಣ ಪೂವಳ, ಪ್ರೇಮಾ, ಪವಿತ್ರಾ, ಸುಷ್ಮಾ, ಎಲಿಯಾಸ್ ಡಿಸೋಜ, ಜಯಂತ ಗೌಡ ಪಿಡಿಒ ವಿಜಯಶಂಕರ ಆಳ್ವ, ಗೋಳ್ತಮಜಲು ಗ್ರಾಪಂ ಮಾಜಿ ಸದಸ್ಯ ಗೋಪಾಲ ಪೂಜಾರಿ, ಪಾಣೆಮಂಗಳೂರು ರೈತರ ಸೇವಾ ಸಹಕಾರಿ ಸಂಘದ ನಿರ್ದೇಶಕ ಮಹಾಬಲ ಸಾಲಿಯಾನ್ ಮುಳಿಕೊಡಂಗೆ, ರಮೇಶ್ ಶೆಟ್ಟಿಗಾರ್ ಕರಿಂಗಾನ ಉಪಸ್ಥಿತರಿದ್ದರು. ಗೋಳ್ತಮಜಲು ಗ್ರಾ.ಪಂ.ಸದಸ್ಯ ರಾಜೇಶ್ ಕೊಟ್ಟಾರಿ ಕಾರ್ಯಕ್ರಮ ನಿರ್ವಹಿಸಿದರು.
25 ಲಕ್ಷ ರೂ ವೆಚ್ಚದ ಪುಂಜೋಳಿಮಾರುಗುತ್ತು ಪಡ್ಡೆಮಜಲು ಕಾಂಕ್ರೀಟ್ ರಸ್ತೆ ಉದ್ಘಾಟನೆ
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "25 ಲಕ್ಷ ರೂ ವೆಚ್ಚದ ಪುಂಜೋಳಿಮಾರುಗುತ್ತು ಪಡ್ಡೆಮಜಲು ಕಾಂಕ್ರೀಟ್ ರಸ್ತೆ ಉದ್ಘಾಟನೆ"