ಬಂಟ್ವಾಳ

ಬಂಟ್ವಾಳದಲ್ಲಿ ಎಸ್.ಡಿ.ಟಿ.ಯು. ಪ್ರತಿಭಟನೆ, ಬೆಲೆ ಏರಿಕೆ ವಿರುದ್ಧ ಆಕ್ರೋಶ

ಇಂಧನ ತೈಲ ಬೆಲೆ, ಆಟೋ ಎಲ್ಪಿಜಿ, ಅಡುಗೆ ಅನಿಲದ ಬೆಲೆ ಏರಿಕೆಯನ್ನು ವಿರೋಧಿಸಿ ಎಸ್ಡಿಟಿಯು ಬಂಟ್ವಾಳ ತಾಲೂಕು ಸಮಿತಿ ವತಿಯಿಂದ ಶುಕ್ರವಾರ ಬಿಸಿರೋಡ್ ಜಂಕ್ಷನ್ ನಲ್ಲಿ  ಪ್ರತಿಭಟನೆ ನಡೆಯಿತು.

ಈ ಸಂದರ್ಭ ಮಾತನಾಡಿದ ಎಸ್ಡಿಪಿಐ ಜಿಲ್ಲಾ ಕಾರ್ಯದರ್ಶಿ ಅಶ್ರಫ್ ಮಂಚಿ, ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರಕಾರ ಅಸ್ತಿತ್ವಕ್ಕೆ ಬಂದ ನಂತರ ಇಲ್ಲಿನ ಬಡ ಮಧ್ಯಮ ವರ್ಗ ವಿವಿಧ ರೀತಿಯಲ್ಲಿ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದರು.

ಎಸ್ಡಿಟಿಯು ಬಂಟ್ವಾಳ ತಾಲೂಕು ಸಮಿತಿ ಅಧ್ಯಕ್ಷ ಖಾದರ್ ಆಲಾಡಿ ಪ್ರತಿಭಟನೆಯ  ನೇತ್ರತ್ವನ್ನು ವಹಿಸಿದರು, ಎಸ್ಡಿಪಿಐ ಜಿಲ್ಲಾ ಕಾರ್ಯದರ್ಶಿ ಅನ್ವರ್ ಸಾದತ್  ಬಜತ್ತೂರು, ಎಸ್ಡಿಟಿಯು ದ.ಕ. ಜಿಲ್ಲಾಧ್ಯಕ್ಷ ಖಾದರ್ ಫರಂಗಿಪೇಟೆ, ಎಸ್ಡಿಪಿಐ ಬಂಟ್ವಾಳ ತಾಲೂಕು ಸಮಿತಿ ಅಧ್ಯಕ್ಷ ಕಲಂದರ್ ಪರ್ತಿಪ್ಪಾಡಿ, ಎಪಿಎಂಸಿ ಬಂಟ್ವಾಳ ತಾಲೂಕು ಸಮಿತಿ ಮಾಜಿ ಅಧ್ಯಕ್ಷ ಅಬೂಬಕ್ಕರ್ ಕೆ.ಎಚ್. ಮಾತನಾಡಿದರು,  ಆಟೋ ಯೂನಿಯನ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುಸ್ತಫಾ ಪರ್ಲಿಯಾ, ಬಂಟ್ವಾಳ ತಾಲೂಕು ಅಧ್ಯಕ್ಷ ಸಂಶುದ್ದೀನ್ ಪಲ್ಲಮಜಲ್, ಉಪಾಧ್ಯಕ್ಷ ಯಾಕೂಬ್ ಮದ್ದ,  ಕಾರ್ಯದರ್ಶಿ ಇಲ್ಯಾಸ್ ವಗ್ಗ ಮತ್ತಿತರರು ಉಪಸ್ಥಿತರಿದ್ದರು. ಬಳಿಕ ಆಟೋ ರಿಕ್ಷಾ ಹಗ್ಗದಿಂದ ಕಟ್ಟಿ ತಹಶೀಲ್ದಾರ್ ಕಚೇರಿವರೆಗೆ ಎಳೆಯುವ ಡೆಮೋ ನಡೆಸಲಾಯಿತು, ಪ್ರಟಿಭಟನಾಕಾರರು ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿದರು.  ಎಸ್ಡಿಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಲಿಕ್ ಕೊಲಕೆ ಸ್ವಾಗತಿಸಿ ನಿರೂಪಿಸಿದರು.

NEWSDESK