ಮಾಹಿತಿ

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶ – ಅರ್ಜಿ ಆಹ್ವಾನ

ಮಂಗಳೂರು, (ಕರ್ನಾಟಕ ವಾರ್ತೆ):- ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸ್ತುತ ಸಾಲಿನ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ   ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳು ವೆಬ್‍ಸೈಟ್ www.backwardclasses.kar.nic.in ಅಥವಾ karepass.cgg.gov.in ನಲ್ಲಿ ಫೆಬ್ರವರಿ 14 ರೊಳಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಯವರ ಕಛೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ರೇಡಿಯೋಪಾರ್ಕ್-ಉರ್ವಸ್ಟೋರ್, ಮಂಗಳೂರು ಅಥವಾ ದೂರವಾಣಿ ಸಂಖ್ಯೆ: 0824-2453650 ನ್ನು  ಸಂಪರ್ಕಿಸಬಹುದು ಎಂದು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

NEWSDESK

Recent Posts