ಬಂಟ್ವಾಳ

“ಗ್ರಾಮಗಳ ಅಭಿವೃದ್ಧಿಯಾದರೆ ದೇಶದ ಅಭಿವೃದ್ಧಿ ಸಾಧ್ಯ” – ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು

ಬಂಟ್ವಾಳ: “ಗ್ರಾಮಗಳನ್ನು ರಾಮರಾಜ್ಯ ಮಾಡುವ ಉದ್ದೇಶದಿಂದ ಹತ್ತು ವರ್ಷಗಳ ಹಿಂದೆ ಮಾಡಲಾದ ವ್ಯವಸ್ಥೆ ಇಂದು ಗ್ರಾಮದ ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದೆ” ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು.

ಬಂಟ್ವಾಳ ತಾಲೂಕು ಪಂಚಾಯತ್ ಸಭಾಂಗಣದಲ್ಲಿ  ನಡೆದ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ(ರಿ.) ಇದರ ಜಿಲ್ಲಾ ಘಟಕದ ಸರ್ವ- ಸದಸ್ಯರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

“ ಇಡೀ ಜಿಲ್ಲೆಯಲ್ಲಿ 190 ಪಿಡಿಒಗಳು ಕೆಲಸ ಮಾಡುತ್ತಿದ್ದು, ಗ್ರಾಮದ ಅಭಿವೃದ್ಧಿಗೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಜತೆಯಾಗಿ ಸಮನ್ವಯದಿಂದ ನಡೆಯಬೇಕು. ಗ್ರಾಮಗಳ ಅಭಿವೃದ್ಧಿಯಾದರೆ ದೇಶದ ಅಭಿವೃದ್ಧಿ ಸಾಧ್ಯ. ಪಿಡಿಒಗಳಿಗೆ ಹಕ್ಕುಗಳ ಜತೆ ಹೆಚ್ಚಿನ ಜವಾಬ್ದಾರಿಯೂ ಇದೆ. ಜನರು ನಿಮ್ಮ ಬಳಿ ಬಂದಾಗ ಅವರ ಜೊತೆ ಜವಾಬ್ದಾರಿಯಿಂದ ವ್ಯವಹಾರ ನಡೆಸಿ, ಗ್ರಾಮದ ಬಡಜನರ ಜತೆ ಸಹನೆಯಿಂದ ನಡೆದುಕೊಳ್ಳಿ. ಸಂಘಟನೆಯ ಮೂಲಕ  ಕುಂದುಕೊರತೆಗಳನ್ನು ನಿವಾರಿಸಲು ಸರಕಾರ ಸಿದ್ಧವಿದೆ” ಎಂದರು.

ಜಾಹೀರಾತು

ಪಿಡಿಒಗಳ ಸಂಘದ ಜಿಲ್ಲಾ ಅಧ್ಯಕ್ಷ ನಾಗೇಶ್ ಅವರು ಮಾತನಾಡಿ – ಅಭಿವೃದ್ಧಿ ಅಧಿಕಾರಿಗಳ ಹುದ್ದೆಯನ್ನು ಗ್ರೂಪಿ ಬಿಗೆ ಮೇಲ್ದರ್ಜೆಗೇರಿಸುವುದು ಹಾಗೂ ಬಾಕಿ ಇರುವ ಸಹಾಯಕ ನಿರ್ದೇಶಕರ ಹುದ್ದೆಗೆ ಮುಂಬಡ್ತಿ ನೀಡುವ ಕಾರ್ಯವನ್ನು ಚುರುಕುಗೊಳಿಸುವಂತೆ ಸರಕಾರದ ಜೊತೆ ಮಾತುಕತೆ ಮಾಡುವಂತೆ ಮನವಿ ಮಾಡಿದರು. ಜಿಲ್ಲಾ ಉಪಾಧ್ಯಕ್ಷ ಶಿವಾನಂದ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಮಹಿಳಾ ಉಪಾಧ್ಯಕ್ಷೆ ಪೂರ್ಣಿಮಾ ಉಪಸ್ಥಿತಿದರಿದ್ದರು. ಸಂಘಟನಾ ಕಾರ್ಯದರ್ಶಿ ಗಾಯತ್ರಿ ಪಿ.ಧನ್ಯವಾದ ನೀಡಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
NEWSDESK