ಮಜಿ ವೀರಕಂಬ – ಶಾಲಾಭಿವೃದ್ಧಿ ಸಮಿತಿಯ ಸದಸ್ಯರಿಗೆ ತರಬೇತಿ ಕಾರ್ಯಕ್ರಮ

ದಕ್ಷಿಣ ಕನ್ನಡ  ಜಿಲ್ಲಾ ಪಂಚಾಯತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಮಜಿ-ವೀರಕಂಬ ಇಲ್ಲಿ ಶಾಲಾಭಿವೃದ್ಧಿ ಸಮಿತಿಯ ಸದಸ್ಯರಿಗೆ ತರಬೇತಿ ನೀಡುವ ಕಾರ್ಯಕ್ರಮವು ನಡೆಯಿತು. ಈ ಕಾರ್ಯಕ್ರಮವನ್ನು ಕಲ್ಲಡ್ಕ  ಕ್ಲಸ್ಟರಿನ  ಸಂಪನ್ಮೂಲ ವ್ಯಕ್ತಿ ಶ್ರೀಮತಿ ಮೆಟಿಲ್ಡಾ ಉದ್ಘಾಟಿಸಿ ತರಬೇತಿಯ ಅವಶ್ಯಕತೆಗಳ ಬಗ್ಗೆ ವಿವರಿಸಿದರು. ಸಂಪನ್ಮೂಲ ವ್ಯಕ್ತಿ, ಕೆಲಿಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ತಿಮ್ಮಪ್ಪ ನಾಯ್ಕರು – ಶಾಲಾಭಿವೃದ್ದಿ ಸಮಿತಿಯ ಸದಸ್ಯರ ಕಾರ್ಯ ಹಾಗೂ ಕರ್ತವ್ಯ ಮತ್ತು ಶಾಲಾಭಿವೃದ್ಧಿ ಸಮಿತಿಯ ರಚನೆಯ ಬಗ್ಗೆ ವಿವರಿಸಿದರು.

ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ, ಇನ್ನೋರ್ವ ತರಬೇತುದಾರರು ಸಂಗೀತಾ ಶರ್ಮ, ಶಿಕ್ಷಣದಲ್ಲಿ  ತಂತ್ರಜ್ಞಾನದ ಬಳಕೆ ಹಾಗೂ ಎಸ್ ಡಿ ಎಂ ಸಿ ಯ ಕತ೯ವ್ಯದ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಸಂಜೀವ ಮೂಲ್ಯ, ಉಪಾಧ್ಯಕ್ಷರಾದ ವಿಜಯ ಶೇಖರ್ ಬಿ, ವೀರಕಂಬ  ಗ್ರಾಮ ಪಂಚಾಯತ್ ಸದಸ್ಯರಾದ ಮೀನಾಕ್ಷಿ ಸುನಿಲ್ ಮತ್ತು ಶಾಲಾಭಿವೃದ್ದಿ ಸಮಿತಿಯ ಸದಸ್ಯರು ಭಾಗವಹಿಸಿದ್ದರು. ಶಿಕ್ಷಕಿ ಶಕುಂತಲ ಪ್ರಾರ್ಥಿಸಿದರು, ಮುಖ್ಯ ಶಿಕ್ಷಕ ನಾರಾಯಣ ಪೂಜಾರಿ ಸ್ವಾಗತಿಸಿದರು, ಶಿಕ್ಷಕಿ ಅನುಷಾ ವಂದಿಸಿದರು. ಶಿಕ್ಷಕಿ ಸಂಗೀತಾ ಶರ್ಮ ಕಾರ್ಯಕ್ರಮ ನಿರೂಪಣೆ ಮಾಡಿದರು. ಶಾಲಾಭಿವೃದ್ಧಿ ಸಮಿತಿಯ ಸದಸ್ಯರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಮಜಿ ವೀರಕಂಬ – ಶಾಲಾಭಿವೃದ್ಧಿ ಸಮಿತಿಯ ಸದಸ್ಯರಿಗೆ ತರಬೇತಿ ಕಾರ್ಯಕ್ರಮ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*