ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಮಜಿ-ವೀರಕಂಬ ಇಲ್ಲಿ ಶಾಲಾಭಿವೃದ್ಧಿ ಸಮಿತಿಯ ಸದಸ್ಯರಿಗೆ ತರಬೇತಿ ನೀಡುವ ಕಾರ್ಯಕ್ರಮವು ನಡೆಯಿತು. ಈ ಕಾರ್ಯಕ್ರಮವನ್ನು ಕಲ್ಲಡ್ಕ ಕ್ಲಸ್ಟರಿನ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಮೆಟಿಲ್ಡಾ ಉದ್ಘಾಟಿಸಿ ತರಬೇತಿಯ ಅವಶ್ಯಕತೆಗಳ ಬಗ್ಗೆ ವಿವರಿಸಿದರು. ಸಂಪನ್ಮೂಲ ವ್ಯಕ್ತಿ, ಕೆಲಿಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ತಿಮ್ಮಪ್ಪ ನಾಯ್ಕರು – ಶಾಲಾಭಿವೃದ್ದಿ ಸಮಿತಿಯ ಸದಸ್ಯರ ಕಾರ್ಯ ಹಾಗೂ ಕರ್ತವ್ಯ ಮತ್ತು ಶಾಲಾಭಿವೃದ್ಧಿ ಸಮಿತಿಯ ರಚನೆಯ ಬಗ್ಗೆ ವಿವರಿಸಿದರು.
ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ, ಇನ್ನೋರ್ವ ತರಬೇತುದಾರರು ಸಂಗೀತಾ ಶರ್ಮ, ಶಿಕ್ಷಣದಲ್ಲಿ ತಂತ್ರಜ್ಞಾನದ ಬಳಕೆ ಹಾಗೂ ಎಸ್ ಡಿ ಎಂ ಸಿ ಯ ಕತ೯ವ್ಯದ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಸಂಜೀವ ಮೂಲ್ಯ, ಉಪಾಧ್ಯಕ್ಷರಾದ ವಿಜಯ ಶೇಖರ್ ಬಿ, ವೀರಕಂಬ ಗ್ರಾಮ ಪಂಚಾಯತ್ ಸದಸ್ಯರಾದ ಮೀನಾಕ್ಷಿ ಸುನಿಲ್ ಮತ್ತು ಶಾಲಾಭಿವೃದ್ದಿ ಸಮಿತಿಯ ಸದಸ್ಯರು ಭಾಗವಹಿಸಿದ್ದರು. ಶಿಕ್ಷಕಿ ಶಕುಂತಲ ಪ್ರಾರ್ಥಿಸಿದರು, ಮುಖ್ಯ ಶಿಕ್ಷಕ ನಾರಾಯಣ ಪೂಜಾರಿ ಸ್ವಾಗತಿಸಿದರು, ಶಿಕ್ಷಕಿ ಅನುಷಾ ವಂದಿಸಿದರು. ಶಿಕ್ಷಕಿ ಸಂಗೀತಾ ಶರ್ಮ ಕಾರ್ಯಕ್ರಮ ನಿರೂಪಣೆ ಮಾಡಿದರು. ಶಾಲಾಭಿವೃದ್ಧಿ ಸಮಿತಿಯ ಸದಸ್ಯರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು.