ಮಂಗಳೂರು ವಿಶ್ವವಿದ್ಯಾನಿಲಯದ ಕಾನೂನು ಪದವಿಯ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಕೋವಿಡ್-19 ಹಿನ್ನೆಲೆಯಲ್ಲಿ ಪರೀಕ್ಷೆಗಳನ್ನು ಪ್ರಸ್ತುತ ಸಾಲಿನ ಏಪ್ರಿಲ್‍ನಲ್ಲಿ ನಡೆಸಲಾಗುವುದು. ಪರೀಕ್ಷೆ ಬರೆಯಲು ಬಾಕಿಯಿರುವ ಪುನರಾವರ್ತಿತ ವಿದ್ಯಾರ್ಥಿಗಳು ಆಯಾಯ ಕಾಲೇಜುಗಳಲ್ಲಿ ನೋಂದಣಿ ಮಾಡಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಕುಲಸಚಿವರ ಕಚೇರಿ (ಪರೀಕ್ಷಾಂಗ), ಮಂಗಳಗಂಗೋತ್ರಿ ದೂ.ಸಂಖ್ಯೆ: 0824-2287327/2287659 ಹಾಗೂ www.controller@mangaloreuniversity.ac.in ನ್ನು ಸಂಪರ್ಕಿಸಬಹುದು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರು (ಪರೀಕ್ಷಾಂಗ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.