ಪ.ಗೋ. ಪ್ರಶಸ್ತಿಗೆ ಅರ್ಜಿ ಆಹ್ವಾನ

ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಗ್ರಾಮೀಣ ಯುವ ಪತ್ರಕರ್ತರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ನೀಡಲಾಗುತ್ತಿರುವ ಪ್ರತಿಷ್ಠಿತ ಪ.ಗೋ. (ಪದ್ಯಾಣ ಗೋಪಾಲಕೃಷ್ಣ) ಪ್ರಶಸ್ತಿಗಾಗಿ   ಅರ್ಜಿಗಳನ್ನು ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು ಹಾಗೂ ಕಾಸರಗೋಡು ಜಿಲ್ಲೆಯ  ಕಾರ್ಯನಿರತ  ಪತ್ರಕರ್ತರು ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರ ವಯಸ್ಸು 45 ಮೀರಿರಬಾರದು. ಗ್ರಾಮೀಣ, ಅಭಿವೃದ್ಧಿಪರ ಮತ್ತು ಮಾನವೀಯ ವರದಿಗಳನ್ನು ಮಾತ್ರ ಪರಿಗಣಿಸಲಾಗುವುದು. ಪ್ರಶಸ್ತಿ 10,001 ರೂ. ನಗದು, ಪ್ರಶಸ್ತಿ ಫಲಕ ಹಾಗೂ ಸ್ಮರಣಿಕೆ ಒಳಗೊಂಡಿರುತ್ತದೆ. 

2020ನೇ ಸಾಲಿನ ಪ್ರಶಸ್ತಿಗೆ 2020ರ ಜನವರಿ 1ರಿಂದ ಡಿಸೆಂಬರ್ 31ರವರೆಗೆ ಕನ್ನಡ ಪತ್ರಿಕೆಗಳಲ್ಲಿ ಪ್ರಕಟಗೊಂಡಿರುವ ವರದಿಗಳಿಗೆ ಸೀಮಿತವಾಗಿರುತ್ತದೆ.ಒಬ್ಬರಿಗೆ ಎರಡು ವರದಿಗಳನ್ನು ಮಾತ್ರ ಕಳುಹಿಸಲು ಅವಕಾಶ ಇರುತ್ತದೆ. ಒಂದು ಬಾರಿ  ಪ್ರಶಸ್ತಿ ಪಡೆದವರಿಗೆ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶವಿಲ್ಲ. ಪ್ರಶಸ್ತಿಗಾಗಿ ಅರ್ಜಿಸಲ್ಲಿಸುವವರು ವರದಿಯ ನಾಲ್ಕು  ಪ್ರತಿಗಳನ್ನು(ಒಂದು ಮೂಲಪ್ರತಿ ಕಡ್ಡಾಯ) ಸಲ್ಲಿಸಬೇಕು. ವರದಿಯಲ್ಲಿ ವರದಿಗಾರರ ಬೈಲೈನ್ ಪ್ರಕಟಗೊಂಡಿರಬೇಕು. ಅರ್ಜಿಯೊಂದಿಗೆ ಭಾವಚಿತ್ರವಿರುವ ಸ್ವವಿವರವನ್ನು ಸಲ್ಲಿಸತಕ್ಕದ್ದು. ಅರ್ಜಿಗಳನ್ನು ಕಳುಹಿಸಲು 2021 ಫೆಬ್ರವರಿ 28 ಕೊನೆಯ ದಿನಾಂಕವಾಗಿದೆ  ಎಂದು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಜಿ ಸಲ್ಲಿಸಬೇಕಾದ ವಿಳಾಸ:

ಜಾಹೀರಾತು

ಪ್ರಧಾನ ಕಾರ್ಯದರ್ಶಿ,

..ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ,

ಪತ್ರಿಕಾ ಭವನ, ಉರ್ವಮಾರ್ಕೆಟ್ ರಸ್ತೆ,

ಜಾಹೀರಾತು

ಮಂಗಳೂರು575 006.

ದೂ: 0824-2450111.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಪ.ಗೋ. ಪ್ರಶಸ್ತಿಗೆ ಅರ್ಜಿ ಆಹ್ವಾನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*