ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಗ್ರಾಮೀಣ ಯುವ ಪತ್ರಕರ್ತರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ನೀಡಲಾಗುತ್ತಿರುವ ಪ್ರತಿಷ್ಠಿತ ಪ.ಗೋ. (ಪದ್ಯಾಣ ಗೋಪಾಲಕೃಷ್ಣ) ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು ಹಾಗೂ ಕಾಸರಗೋಡು ಜಿಲ್ಲೆಯ ಕಾರ್ಯನಿರತ ಪತ್ರಕರ್ತರು ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರ ವಯಸ್ಸು 45 ಮೀರಿರಬಾರದು. ಗ್ರಾಮೀಣ, ಅಭಿವೃದ್ಧಿಪರ ಮತ್ತು ಮಾನವೀಯ ವರದಿಗಳನ್ನು ಮಾತ್ರ ಪರಿಗಣಿಸಲಾಗುವುದು. ಪ್ರಶಸ್ತಿ 10,001 ರೂ. ನಗದು, ಪ್ರಶಸ್ತಿ ಫಲಕ ಹಾಗೂ ಸ್ಮರಣಿಕೆ ಒಳಗೊಂಡಿರುತ್ತದೆ.
2020ನೇ ಸಾಲಿನ ಪ್ರಶಸ್ತಿಗೆ 2020ರ ಜನವರಿ 1ರಿಂದ ಡಿಸೆಂಬರ್ 31ರವರೆಗೆ ಕನ್ನಡ ಪತ್ರಿಕೆಗಳಲ್ಲಿ ಪ್ರಕಟಗೊಂಡಿರುವ ವರದಿಗಳಿಗೆ ಸೀಮಿತವಾಗಿರುತ್ತದೆ.ಒಬ್ಬರಿಗೆ ಎರಡು ವರದಿಗಳನ್ನು ಮಾತ್ರ ಕಳುಹಿಸಲು ಅವಕಾಶ ಇರುತ್ತದೆ. ಒಂದು ಬಾರಿ ಪ್ರಶಸ್ತಿ ಪಡೆದವರಿಗೆ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶವಿಲ್ಲ. ಪ್ರಶಸ್ತಿಗಾಗಿ ಅರ್ಜಿಸಲ್ಲಿಸುವವರು ವರದಿಯ ನಾಲ್ಕು ಪ್ರತಿಗಳನ್ನು(ಒಂದು ಮೂಲಪ್ರತಿ ಕಡ್ಡಾಯ) ಸಲ್ಲಿಸಬೇಕು. ವರದಿಯಲ್ಲಿ ವರದಿಗಾರರ ಬೈಲೈನ್ ಪ್ರಕಟಗೊಂಡಿರಬೇಕು. ಅರ್ಜಿಯೊಂದಿಗೆ ಭಾವಚಿತ್ರವಿರುವ ಸ್ವವಿವರವನ್ನು ಸಲ್ಲಿಸತಕ್ಕದ್ದು. ಅರ್ಜಿಗಳನ್ನು ಕಳುಹಿಸಲು 2021 ಫೆಬ್ರವರಿ 28 ಕೊನೆಯ ದಿನಾಂಕವಾಗಿದೆ ಎಂದು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ:
ಪ್ರಧಾನ ಕಾರ್ಯದರ್ಶಿ,
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ,
ಪತ್ರಿಕಾ ಭವನ, ಉರ್ವಮಾರ್ಕೆಟ್ ರಸ್ತೆ,
ಮಂಗಳೂರು –575 006.
ದೂ: 0824-2450111.
ಕೆ.ಎನ್.ಆರ್. ಕನ್ಸಸ್ಟ್ರಕ್ಷನ್ಸ್ ಗುತ್ತಿಗೆ ವಹಿಸಿಕೊಂಡಿರುವ ಬಿ.ಸಿ.ರೋಡ್ ಭಾಗದ ಕಾಮಗಾರಿಯಲ್ಲಿ ಸೇತುವೆ ಪೂರ್ಣಗೊಳಿಸಿ ಓಡಾಟ ಆರಂಭಗೊಂಡಿರುವುದು ಮಹತ್ವದ ಹೆಜ್ಜೆಯಾಗಿದ್ದು, ಬಿ.ಸಿ.ರೋಡ್ ಸರ್ಕಲ್…