ಬಂಟ್ವಾಳ: ಸರ್ಕಾರದ ಸೂಚನೆ ಪ್ರಕಾರ, ಮೂಡುನಡುಗೋಡು ಗ್ರಾಮದ ದಡ್ಡಲಕಾಡು ದ.ಕ.ಜಿಲ್ಲಾ ಪಂಚಾಯಿತಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ (ಸರ್ಕಾರಿ ಆಂಗ್ಲ ಮಾಧ್ಯಮ ಪ್ರೌಢಶಾಲೆ)ಯಲ್ಲಿ ಫೆ.20ರಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್. ಅಧ್ಯಕ್ಷತೆಯಲ್ಲಿ ಗ್ರಾಮವಾಸ್ತವ್ಯ ಕಾರ್ಯಕ್ರಮ ನಡೆಯಲಿದೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉದ್ಘಾಟಿಸಲಿದ್ದಾರೆ.
ಈ ಹಿನ್ನೆಲೆಯಲ್ಲಿ ಶಾಲೆಯಲ್ಲಿ ಈಗಾಗಲೇ ಸಿದ್ಧತೆಗಳನ್ನು ನಡೆಸಲಾಗುತ್ತಿದ್ದು, ಎಲ್ಲ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿರುತ್ತಾರೆ. ಕಂದಾಯ ಇಲಾಖೆ ಹಾಗೂ ಇತರ ಇಲಾಖೆಗಳ ಸವಲತ್ತು ವಿತರಣೆ, ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಮುಖ್ಯಸ್ಥರೊಂದಿಗೆ ಸಮಾಲೋಚಿಸಲು ಇಲ್ಲಿ ಅವಕಾಶ ಇರುತ್ತದೆ. ಮೂಡುನಡುಗೋಡು ಗ್ರಾಮದ ಸಾರ್ವಜನಿಕರ ಅಹವಾಲುಗಳಿದ್ದರೆ ಗ್ರಾಪಂ ದೂರುಪೆಟ್ಟಿಗೆಗೆ, ಗ್ರಾಮಲೆಕ್ಕಿಗರಿಗೆ ಅಥವಾ ತಾಲೂಕು ಕಚೇರಿಗೆ ಖುದ್ದಾಗಿ ಸಲ್ಲಿಸಲು ಈಗಾಗಲೇ ಸೂಚಿಸಲಾಗಿದೆ ಎಂದು ತಹಸೀಲ್ದಾರ್ ರಶ್ಮಿ ಎಸ್.ಆರ್. ತಿಳಿಸಿದ್ದಾರೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…