ಬಂಟ್ವಾಳ

ಫೆ.20ರಂದು ದಡ್ಡಲಕಾಡು ಶಾಲೆಯಲ್ಲಿ ಬಂಟ್ವಾಳ ತಹಸೀಲ್ದಾರ್ ಗ್ರಾಮವಾಸ್ತವ್ಯ

ಬಂಟ್ವಾಳ: ಸರ್ಕಾರದ ಸೂಚನೆ ಪ್ರಕಾರ, ಮೂಡುನಡುಗೋಡು ಗ್ರಾಮದ ದಡ್ಡಲಕಾಡು ದ.ಕ.ಜಿಲ್ಲಾ ಪಂಚಾಯಿತಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ (ಸರ್ಕಾರಿ ಆಂಗ್ಲ ಮಾಧ್ಯಮ ಪ್ರೌಢಶಾಲೆ)ಯಲ್ಲಿ ಫೆ.20ರಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್. ಅಧ್ಯಕ್ಷತೆಯಲ್ಲಿ ಗ್ರಾಮವಾಸ್ತವ್ಯ ಕಾರ್ಯಕ್ರಮ ನಡೆಯಲಿದೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉದ್ಘಾಟಿಸಲಿದ್ದಾರೆ.

ಈ ಹಿನ್ನೆಲೆಯಲ್ಲಿ ಶಾಲೆಯಲ್ಲಿ ಈಗಾಗಲೇ ಸಿದ್ಧತೆಗಳನ್ನು ನಡೆಸಲಾಗುತ್ತಿದ್ದು, ಎಲ್ಲ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿರುತ್ತಾರೆ. ಕಂದಾಯ ಇಲಾಖೆ ಹಾಗೂ ಇತರ ಇಲಾಖೆಗಳ ಸವಲತ್ತು ವಿತರಣೆ, ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಮುಖ್ಯಸ್ಥರೊಂದಿಗೆ ಸಮಾಲೋಚಿಸಲು ಇಲ್ಲಿ ಅವಕಾಶ ಇರುತ್ತದೆ. ಮೂಡುನಡುಗೋಡು ಗ್ರಾಮದ ಸಾರ್ವಜನಿಕರ ಅಹವಾಲುಗಳಿದ್ದರೆ ಗ್ರಾಪಂ ದೂರುಪೆಟ್ಟಿಗೆಗೆ, ಗ್ರಾಮಲೆಕ್ಕಿಗರಿಗೆ ಅಥವಾ ತಾಲೂಕು ಕಚೇರಿಗೆ ಖುದ್ದಾಗಿ  ಸಲ್ಲಿಸಲು ಈಗಾಗಲೇ ಸೂಚಿಸಲಾಗಿದೆ ಎಂದು ತಹಸೀಲ್ದಾರ್ ರಶ್ಮಿ ಎಸ್.ಆರ್. ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts