




ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಅವರು ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಶುಕ್ರವಾರ ಭೇಟಿ ನೀಡಿದರು. ಕ್ಷೇತ್ರದಲ್ಲಿ ಕಲಶಾಭಿಷೇಕ ಕಾರ್ಯಕ್ರಮಗಳು ನಡೆಯುತ್ತಿದ್ದು ಈ ಹಿನ್ನೆಲೆಯಲ್ಲಿ ಆಗಮಿಸಿದ ಜಿಲ್ಲಾಧಿಕಾರಿ, ಶ್ರೀ ದೇವರ ದರ್ಶನ ಪಡೆದು, ಪ್ರಸಾದ ಸ್ವೀಕರಿಸಿದರು. ಈ ಸಂದರ್ಭ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಉಪಸ್ಥಿತರಿದ್ದು, ಕ್ಷೇತ್ರದ ಕುರಿತು ವಿವರಿಸಿ, ಕಲಶಾಭಿಷೇಕ ಕಾರ್ಯಕ್ರಮದ ಮಾಹಿತಿಗಳನ್ನು ನೀಡಿದರು. ಕ್ಷೇತ್ರದ ವತಿಯಿಂದ ಜಿಲ್ಲಾಧಿಕಾರಿಯವರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು. ಈ ಸಂದರ್ಭ ಆಡಳಿತ ಮೊಕ್ತೇಸರರಾದ ಡಾ. ಮಂಜಯ್ಯ ಶೆಟ್ಟಿ, ಚೇರ ಸೂರ್ಯನಾರಾಯಣ ರಾವ್, ಕೃಷ್ಣರಾಜ್ ಮಾರ್ಲ ಮುತ್ತೂರು, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾದ ಗಿರಿಪ್ರಕಾಶ್ ತಂತ್ರಿ, ಕಾರ್ಯನಿರ್ವಹಣಾಧಿಕಾರಿ ಜಯಮ್ಮ, ಪ್ರಮುಖರಾದ ಸುಕೇಶ್ ಚೌಟ, ಪವನ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

Be the first to comment on "ಪೊಳಲಿ ಶ್ರೀ ರಾಜರಾಜೇಶ್ವರಿ ಕ್ಷೇತ್ರಕ್ಕೆ ದ.ಕ. ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಭೇಟಿ"