ಬಂಟ್ವಾಳ: ಪಂಜಿಕಲ್ಲು ಗ್ರಾಮ ಪಂಚಾಯಿತಿಗೊಳಪಟ್ಟ ಮೂಡನಡುಗೋಡು ಗ್ರಾಮದ ಗ್ರಾಮವಾಸ್ತವ್ಯ ಕಾರ್ಯಕ್ರಮಕ್ಕೆ ದಡ್ಡಲಕಾಡು ಸರಕಾರಿ ಉನ್ನತೀಕರಿಸಿದ ಶಾಲೆಯಲ್ಲಿ ಶನಿವಾರ ಬೆಳಿಗ್ಗೆ ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್. ಗ್ರಾಮವಾಸ್ತವ್ಯ ನಡೆಸಿದರು.
ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮಾತನಾಡಿ ಗ್ರಾಮೀಣ ಪ್ರದೇಶದ ಜನರ ಸಮಸ್ಯೆಗಳನ್ನು ಆಲಿಸಲು ಸರಕಾರವೇ ಜನರ ಮನೆಬಾಗಿಲಿಗೆ ಹೋಗುವ ಗ್ರಾಮವಾಸ್ತ್ಯವ್ಯ ಕಾರ್ಯಕ್ರಮ ಅರ್ಥಪೂರ್ಣವಾದುದು ಎಂದರು.
ತಾಲೂಕು ಪಂಚಾಯತಿ ಅಧ್ಯಕ್ಷ ಚಂದ್ರಹಾಸ ಕರ್ಕೇರಾ, ಉಪಾಧ್ಯಕ್ಷ ಅಬ್ಬಾಸ್ ಅಲಿ, ಪಂಜಿಕಲ್ಲು ಗ್ರಾ.ಪಂ. ಅಧ್ಯಕ್ಷ ಸಂಜೀವ ಪೂಜಾರಿ ಪಿಲಿಂಗಾಲು, ಉಪಾಧ್ಯಕ್ಷೆ ಜಯಶ್ರೀ ಆಚಾರ್ಯ ಪಟ್ರಾಡಿ, ತಾ.ಪಂ.ಸದಸ್ಯ ಪದ್ಮಾವತಿ, ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಅಂಚನ್, ಪಂಚಾಯತಿ ಸದಸ್ಯರಾದ ಪೂವಪ್ಪ ಮೆಂಡನ್, ಚಿತ್ರಾಕ್ಷಿ, ರೂಪಾ ಲೋಕನಾಥ್, ಲಕ್ಷ್ಮೀನಾರಾಯಣ ಗೌಡ, ಮೋಹನದಾಸ್, ವಿಕೇಶ್, ಬಾಲಕೃಷ್ಣ, ಹರೀಶ್, ಶೋಭಾ, ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು, ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್, ದಡ್ಡಲಕಾಡು ಸರಕಾರಿ ಪ್ರೌಢಶಾಲೆಯ ಶಾಲಾಭಿವೃದ್ದಿ ಸಮಿತಿ ಕಾರ್ಯಧ್ಯಕ್ಷ ಪುರುಷೋತ್ತಮ ಅಂಚನ್, ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ರಾಮಚಂದ್ರ ಪೂಜಾರಿ ಕರೆಂಕಿ, ಮುಖ್ಯೋಪಾಧ್ಯಯರಾದ ಮೌರೀಸ್ ಡಿಸೋಜಾ, ಅನಿತಾ ಹಾಗೂ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.